Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ಯತ್ನಾಳರ ಉಚ್ಚಾಟನೆ ಖಂಡಿಸಿ ದೇವರಹಿಪ್ಪರಗಿಯಲ್ಲಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಶಾಸಕ ಯತ್ನಾಳರ ಉಚ್ಚಾಟನೆ ಖಂಡಿಸಿ ದೇವರಹಿಪ್ಪರಗಿಯಲ್ಲಿ ಪ್ರತಿಭಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿಯಿಂದ ಉಚ್ಛಾಟಿಸಿದ ಕ್ರಮ ಖಂಡಿಸಿ ಯತ್ನಾಳ ಅಭಿಮಾನಿಗಳು ಪ್ರತಿಭಟನೆ ಕೈಗೊಂಡು ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಮೊಹರೆ ಹಣಮಂತ್ರಾಯ ವೃತ್ತದಲ್ಲಿ ಮಂಗಳವಾರ ಬೆಳಿಗ್ಗೆ ಸಭೆ ಸೇರಿದ ತಾಲ್ಲೂಕಿನ ವಿವಿಧ ಗ್ರಾಮಗಳ ಅಭಿಮಾನಿಗಳು ರಾಷ್ಟ್ರೀಯ ಹೆದ್ದಾರಿ-೫೦ರಲ್ಲಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುಧ್ದ ಧಿಕ್ಕಾರ ಕೂಗುತ್ತ ಅಂಬೇಡ್ಕರ ವೃತ್ತದಲ್ಲಿ ಅರ್ಧಘಂಟೆಗಳ ಕಾಲ ಹೆದ್ದಾರಿ ಬಂದ್ ಮಾಡಿ ಸಭೆ ಆರಂಭಿಸಿದರು.
ಈ ಸಂದರ್ಭದಲ್ಲಿ ಮತಕ್ಷೇತ್ರದ ಬಿಜೆಪಿ ಧುರೀಣ ಬಸನಗೌಡ ಪಾಟೀಲ (ನಾಗರಾಳಹುಲಿ), ಮಾತನಾಡಿ, ಯತ್ನಾಳರನ್ನು ಪಕ್ಷದಿಂದ ಹೊರಹಾಕುವುದರ ಮೂಲಕ ಎಲ್ಲ ಲಿಂಗಾಯತ ಪ್ರಮುಖ ನಾಯಕರನ್ನು ಮೂಲೆಗುಂಪು ಮಾಡುವುದಾಗಿದೆ. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಹಿಂದೂಗಳ ಬೆನ್ನಿಗೆ ನಿಂತವರು ಯತ್ನಾಳರು ಮಾತ್ರ ಎಂದು ಹೇಳಿದರು.
ಕರ್ನಾಟಕ ರಕ್ಷಣಾ ವೇದಿಕೆಯ ಮಡುಗೌಡ ಬಿರಾದಾರ, ಎ.ಎಸ್.ಪಾಟೀಲ (ನಡಹಳ್ಳಿ) ನಡೆಯನ್ನು ಪ್ರಸ್ತಾಪಿಸಿ ಮಾತನಾಡುತ್ತ, ದೇವರಹಿಪ್ಪರಗಿ ಮತಕ್ಷೇತ್ರದ ಎರಡು ಅವಧಿಯ ಅಧಿಕಾರ ಅನುಭವಿಸಿದ ತಾವು ಈ ಮತಕ್ಷೇತ್ರದ ಅಭಿವೃದ್ದಿಗೆ ಮಾತ್ರ ಶೂನ್ಯ ಕೊಡುಗೆ ನೀಡಿದ್ದೀರಿ. ನಿಮಗೆ ಯತ್ನಾಳರ ಬಗ್ಗೆಯಾಗಲಿ ಅವರ ನಾಯಕತ್ವದ ಬಗ್ಗೆಯಾಗಲಿ ಮಾತನಾಡುವ ಯಾವ ನೈತಿಕತೆ ಇಲ್ಲ. ಸುಮ್ಮನೆ ಬೇಕಾಬಿಟ್ಟಿ ಬಾಯಿ ಹರಿಬಿಡಬೇಡಿ ಎಂದು ಎಚ್ಚರಿಕೆ ನೀಡಿದರು.
ರೈತಸಂಘದ ಜಿಲ್ಲಾಧ್ಯಕ್ಷ ಶಂಕರಗೌಡ ಹಿರೇಗೌಡರ, ಪಂಚಮಸಾಲಿ ಸಮುದಾಯದ ತಾಲ್ಲೂಕು ಅಧ್ಯಕ್ಷ ಗುರುರಾಜ್ ಆಕಳವಾಡಿ, ಸಂಗನಗೌಡ ಬಿರಾದಾರ(ಮುಳಸಾವಳಗಿ), ಕಾಶೀಪತಿ ಕುದರಿ ಮಾತನಾಡಿ, ಉಚ್ಚಾಟನೆ ಮರು ಪರಿಶೀಲಿಸಿ ಯತ್ನಾಳರನ್ನು ಗೌರವಯುತವಾಗಿ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದರು.
ಪಟ್ಟಣ ಪಂಚಾಯಿತಿ ಸದಸ್ಯ ಕಾಸುಗೌಡ ಜಲಕತ್ತಿ, ಮಡಿವಾಳಪ್ಪಗೌಡ ಪಾಟೀಲ, ಪ್ರಕಾಶ ದಾನಗೊಂಡ, ವಿನೋದಗೌಡ ಪಾಟೀಲ, ನಾಗೇಂದ್ರ ಇಂಡಿ, ಮಾಂತೇಶ ವಂದಾಲ, ವೀರೇಶ ಕುದರಿ, ನಿಂಗು ಯಂಭತ್ನಾಳ, ರಾಜೇಂದ್ರ ಭಾವಿಮನಿ, ಮಲ್ಲನಗೌಡ ಜಿಡ್ಡಿಮನಿ, ಕುಮಾರ ಜೋಗೂರ, ಸಾಹೇಬಗೌಡ ಬಿರಾದಾರ, ರಮೇಶ ಮಾಳನೂರ, ಸೋಮು ದೇವೂರ ಸಹಿತ ತಾಲ್ಲೂಕಿನ ಪ್ರಮುಖರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ರಮಜಾನ್ ಈದ್ ಆಚರಣೆ :ರೋಜಾ ಉಪವಾಸಕ್ಕೆ ತೆರೆ
    In (ರಾಜ್ಯ ) ಜಿಲ್ಲೆ
  • ತೇಜಸ್ವಿನಿ ಅನಂತಕುಮಾರ ಗೆ ಅಕ್ಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.