Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆರೆಗಳ ಸಂರಕ್ಷಣೆಗೆ ೧ ವಾರದೊಳಗೆ ಇಂದೀಕರಣ ಮಾಡಿ
(ರಾಜ್ಯ ) ಜಿಲ್ಲೆ

ಕೆರೆಗಳ ಸಂರಕ್ಷಣೆಗೆ ೧ ವಾರದೊಳಗೆ ಇಂದೀಕರಣ ಮಾಡಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಳ್ಮೆ ಪರೀಕ್ಷೆ ಮಾಡಬೇಡಿ-ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ | ಅಧಿಕಾರಿಗಳಿಗೆ ಡಿಸಿ ಟಿ.ಭೂಬಾಲನ್ ಖಡಕ್ ಎಚ್ಚರಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನನ್ನ ತಾಳ್ಮೆ ಪರೀಕ್ಷೆ ಮಾಡಬೇಡಿ, ಕಾರ್ಯದಲ್ಲಿ ಅಲಕ್ಷ್ಯತನ, ನಿಷ್ಕಾಳಜಿ ನಾನು ಸಹಿಸುವುದಿಲ್ಲ. ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಯಾವ ಕೆರೆ ಯಾವ ಇಲಾಖೆಗೆ ಸೇರಿದೆ ಎಂಬುದರ ಕುರಿತು ಒಂದು ವಾರದೊಳಗಾಗಿ ಜಿಲ್ಲೆಯಲ್ಲಿರುವ ಎಲ್ಲ ಕೆರೆಗಳ ಆರ್‌ಟಿಸಿ ಇಂದೀಕರಣ ಮಾಡಿ ಮಾಲೀಕತ್ವ ನಮೂದಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.
ಮಂಗಳವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ತಾಲೂಕಾ ತಹಶೀಲ್ದಾರ, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆ, ಭೂಮಾಪನ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ದಿ ಕುರಿತು ಸಭೆ ನಡೆಸಿ ಅವರು ಸೂಚನೆ ನೀಡಿದ ಅವರು, ಆಯಾ ತಾಲೂಕಾ ತಹಶೀಲ್ದಾರ, ಭೂಮಾಪನ ಇಲಾಖೆ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸಬೇಕು. ಅವಶ್ಯವಿದ್ದಲ್ಲಿ ಪೋಲಿಸರ ಸಹಾಯ ಪಡೆದು ತೆರವಿಗೆ ಕ್ರಮ ವಹಿಸಬೇಕು.
ಜಿಲ್ಲೆಯಲ್ಲಿರುವ ಕೆರೆಗಳಿಗೆ ಸಂಬಂಧಿಸಿದಂತೆ ಆರ್.ಟಿ.ಸಿ. ಇಂದೀಕರಣ ಮಾಡಿ, ಕಾಲಂ ನಂ.೯ ರಲ್ಲಿ ಯಾವ ಇಲಾಖೆಗೆ ಸೇರಿದ ಕೆರೆ ಎಂಬುದು ಮಾಲೀಕತ್ವವನ್ನು ಸ್ಪಷ್ಟವಾಗಿ ನಮೂದಿಸಬೇಕು. ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸಿ ಸಂರಕ್ಷಣೆಗೆ ಕ್ರಮ ವಹಿಸಬೇಕು. ಮುದ್ದೇಬಿಹಾಳ ತಾಲೂಕಿನ ೩೩ ಕೆರೆಗಳ ಪೈಕಿ ೩ ಕೆರೆಗಳು ಲೋಕೋಪಯೋಗಿ ಇಲಾಖೆಯಿಂದ ಪಂಚಾಯತ್ ರಾಜ್ ಇಲಾಖೆಗೆ ವಿಭಜನೆಯಾಗಿದ್ದರೂ ಸಹ ಆರ್.ಟಿ.ಸಿ.ಯಲ್ಲಿ ಇನ್ನೂ ಹಳೆಯ ಮಾಲೀಕತ್ವ ನಮೂದಾಗಿದ್ದು, ಕೂಡಲೇ ಇಂದೀಕರಣ ಮಾಡಿ ಮಹಾನಗರ ಪಾಲಿಕೆ, ಗ್ರಾಮ ಪಂಚಾಯತ್, ತಾಲೂಕಾ ಪಂಚಾಯತ್ ಪಟ್ಟಣ ಪಂಚಾಯತ್ ಸೇರಿದಂತೆ ಯಾವ ಇಲಾಖೆ ಸೇರಿದೆ ಎಂಬುದನ್ನು ನಮೂದಿಸಬೇಕು. ಕೆಲವೊಂದು ನಗರ ಸ್ಥಳೀಯ ಸಂಸ್ಥೆಗಳು ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೇರಿದ್ದು, ಇಂತಹ ಬದಲಾವಣೆಯಾಗಿರುವ, ಆರ್.ಟಿ.ಸಿ.ಯಲ್ಲಿ ಬದಲಾವಣೆ ಮಾಡಿ ನಮೂದಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

“ಕೆರೆಗಳ ಸಂರಕ್ಷಣೆಗಾಗಿ ಬಿಡುಗಡೆಯಾದ ಅನುದಾನವನ್ನು ಅಧಿಕಾರಿಗಳು ಸಮರ್ಪಕವಾಗಿ ಬಳಕೆ ಮಾಡಬೇಕು. ಯಾವುದೇ ಅನುದಾನ ಬಾಕಿ ಉಳಿಸಿಕೊಳ್ಳಬಾರದು. ಅನುದಾನವನ್ನು ಕೆರೆಗಳಿಗೆ ತಂತಿ, ಬೇಲಿ, ಕಂದಕ ತೆಗೆಯುವುದು ಸೇರಿದಂತೆ ಅನುದಾನ ಬಳಕೆ ಮಾಡಿ ಬಳಕೆ ಪ್ರಮಾಣ ಪತ್ರ ಸಲ್ಲಿಸಬೇಕು. “

– ಟಿ.ಭೂಬಾಲನ್
ಜಿಲ್ಲಾಧಿಕಾರಿ ವಿಜಯಪುರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.