Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಿಟ್ಟ ಕ್ರಮಕ್ಕೆ ಮುಂದಾಗದ ಸರ್ಕಾರದ ಕ್ರಮಕ್ಕೆ ಠೇವಣಿದಾರರ ಆಕ್ರೋಶ
(ರಾಜ್ಯ ) ಜಿಲ್ಲೆ

ದಿಟ್ಟ ಕ್ರಮಕ್ಕೆ ಮುಂದಾಗದ ಸರ್ಕಾರದ ಕ್ರಮಕ್ಕೆ ಠೇವಣಿದಾರರ ಆಕ್ರೋಶ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೋಆಪರೇಟಿವ್ ಸೊಸೈಟಿ ಠೇವಣಿದಾರರಲ್ಲಿ ಮುಗಿಲು ಮುಟ್ಟಿದ ಆತಂಕ

ಉದಯರಶ್ಮಿ ದಿನಪತ್ರಿಕೆ

ಬೆಳಗಾವಿ: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅರ್ಬನ್ ಕೋಆಪರೇಟಿವ್ ಸೊಸೈಟಿಯಲ್ಲಿಟ್ಟಿದ್ದ
ಠೇವಣಿದಾರರ ಹಣವನ್ನು ಮರಳಿಸಲು ಯಾವುದೇ ದಿಟ್ಟ ಕ್ರಮಕ್ಕೆ ಮುಂದಾಗದೇ ಮೀನಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ ನೊಂದ ಠೇವಣಿದಾರರು ಆಕ್ರೋಶಭರಿತರಾಗಿ ಹೋರಾಟದ ಹಾದಿ ತುಳಿಯುವ ನಿರ್ಧಾರಕ್ಕೆ ಬಂದಿದ್ದಾರೆ.
ಈ ಕುರಿತು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ ನೊಂದ ಠೇವಣಿದಾರರು,
ಕರ್ನಾಟಕ ಸರಕಾರ ಬಡವರ ಪರ ಕಾಳಜಿ ಎಂದೆನ್ನುವುದು ಸಂಪೂರ್ಣ ಸುಳ್ಳು. ನಾಡು ಕಂಡ ಅತ್ಯಂತ ಭ್ರಷ್ಟ ಸರಕಾರ ಇದಾಗಿದೆ. ಸಹಕಾರ ಕ್ಷೇತ್ರ, ಕಂದಾಯ ಇಲಾಖೆ ಮಂತ್ರಿಗಳು ಜನರ ಹಣವನ್ನು ಕೊಳ್ಳೆ ಹೊಡೆಯಲು ಬಿಟ್ಟು ಮೋಜು ನೋಡುತ್ತಿದ್ದಾರೆ. ಬಹು ಕೋಟಿ ವಂಚನೆ ಹಗರಣದ ಬೆಳಗಾವಿ ಮೂಲದ ಸಂಗೊಳ್ಳಿ ರಾಯಣ್ಣ ಸಹಕಾರಿ ಸಂಸ್ಥೆಯಲ್ಲಿ ಸಾವಿರಾರು ಜನರು ತಮ್ಮ ಉಳಿತಾಯಕ್ಕಾಗಿ ಭವಿಷ್ಯಕ್ಕಾಗಿ ಠೇವಣಿ ಹಣವನ್ನ ಇಟ್ಟಿದ್ದರು. ಚಿತ್ರ ಉದ್ಯಮಿ ಆನಂದ ಅಪ್ಪುಗೋಳ ಎಂಬ ವಂಚಕ ಠೇವಣಿದಾರರಿಗೆ ಪಂಗನಾಮ ಹಾಕಿದ್ದು ಸಾವಿರಾರು ಕೋಟಿ ಆಸ್ತಿಯ ದಾಖಲೆ ಇದ್ದರೂ ಕಳೆದ ಏಳು ವರ್ಷದಿಂದ ಸಂಗೊಳ್ಳಿ ರಾಯಣ್ಣ ಸಹಕಾರಿ ಹಣಕಾಸು ಸಂಸ್ಥೆಯ ಅವ್ಯವಹಾರ ಇನ್ನೂ ಇತ್ಯರ್ಥವಾಗಿಲ್ಲ. 2021`ರಲ್ಲಿ ಬೆಳಗಾವಿ ಅಸಿಸ್ಟೆಂಟ್ ಕಮಿಷನರ್ ಕಚೇರಿಯಲ್ಲಿ ಎಲ್ಲರಿಗೂ ಠೇವಣಿ ಪಾತ್ರದ ನಕಲು ಪ್ರತಿಗಳನ್ನು ಹಚ್ಚಲು ಹೇಳಿ ಅರ್ಜಿಗಳನ್ನು ಸ್ವೀಕರಿಸಿದರು. ಬಡವರು ಕಾರ್ಮಿಕರು ಮದ್ಯಮ ವರ್ಗದವರು
ಅರ್ಜಿ ಸಲ್ಲಿಸಿ ತಾವು ತುಂಬಿದ ಠೇವಣಿ ಹಣ ಬರುವುದೆಂದು ದಾರಿ ಕಾಯ್ದರು. ನಾಲ್ಕು ವರ್ಷ ಗತಿಸಿದವು. ಕಳೆದ ಡಿಸೆಂಬರ್ ನಲ್ಲಿ ವಿಶೇಷಾಧಿಕಾರಿ ( KPID ) ಕಂದಾಯ ಇಲಾಖೆಗೆ ಒಳಪಟ್ಟ ಸಂಸ್ಥೆ ಮತ್ತೆ ಪತ್ರಿಕೆಯಲ್ಲಿ ಜಾಹಿರಾತು ಮಾಡಿ, ಠೇವಣಿದಾರರು ಮತ್ತೆ ಅರ್ಜಿ ಸಲ್ಲಿಸಲು ಹೇಳಿದರು. ಬಡವರು ಕೂಲಿ ಕಾರ್ಮಿಕರು ಬೆಂಗಳೂರಿನ ಮಹಾನಗರದಲ್ಲಿ ರಸ್ತೆ ಬದಿ ಮಲಗಿ ತಮ್ಮ ಕಾಗದ ಪತ್ರಗಳನ್ನು ಸಲ್ಲಿಸಿದರು. ಅದನ್ನು ಅತ್ಯಂತ ಶಿಸ್ತುಬದ್ಧವಾಗಿ ಪರಿಶೀಲಿಸಿ ಅದಕ್ಕೆ ರಸೀದಿ ನೀಡಿದರು. ಹಣ ಬರುತ್ತದೆ ಎಂದು ಮತ್ತೆ ಜನರ ನಂಬಿಕೆ ಈಗ ಹುಸಿಯಾಗಿದೆ. 12 ತಿಂಗಳು ಕಳೆದ ನಂತರ ಈಗ ಅಸಿಸ್ಟೆಂಟ್ ಕಮಿಷನರ್ ಕೆ ಪಿ ಐ ಡಿ ಮೂರನೆಯ ಮತ್ತು ನಾಲ್ಕನೆಯ ಮಹಡಿ ಪೋಡಿಯಂ ಬ್ಲಾಕ್ ಡಾ ಅಂಬೇಡ್ಕರ ವೀಧಿ ಬೆಂಗಳೂರ ಕಚೇರಿಯಲ್ಲಿ ದಿನವಿಡೀ ತಪಾಸಣೆ ಮಾಡಿ ಮುದುಕರು, ಮಹಿಳೆಯರು ಸಲ್ಲಿಸಿದ ಅರ್ಜಿಗಳು ಈಗ ಮತ್ತೆ ತಿರಸ್ಕ್ರತವೆಂದು ಪತ್ರ ಹಾಕಿದ್ದಾರೆ.
ಆನಂದ ಅಪ್ಪುಗೋಳ ಎಂಬ ಮೋಸಗಾರನ ಅಸ್ತಿ ಜಪ್ತಿ ಮಾಡಿ ತನಿಖೆ ನಡೆಸಿ ಶಿಕ್ಷೆ ಕೊಡುವ ಬದಲು ಕೃಷ್ಣಾ ಭೈರೇಗೌಡ ಕಂದಾಯ ಮಂತ್ರಿ, ಕೆ ಏನ್ ರಾಜಣ್ಣ ಸಹಕಾರ ಮಂತ್ರಿ ಮತ್ತು ಜಾಣ ಕುರುಡುತನ ತೋರಿಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಕೂಡಲೇ ನಮಗೆ ಸಹಾಯ ಮಾಡಲಿ. ಇದರಲ್ಲಿ ಎಷ್ಟೋ ಜನರು ಸತ್ತಿದ್ದಾರೆ. ಒಂದು ವೇಳೆ ಸಮಯಕ್ಕೆ ಸರಿಯಾಗಿ ಹಣ ಬರದಿದ್ದರೆ ಮತ್ತಷ್ಟು ಜನರು ಆತ್ಮ ಹತ್ಯೆ ಮಾಡಿಕೊಳ್ಳುವ ಪ್ರಸಂಗ ಬಂದಿದೆ. ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳ ಕಿರುಕಳ ತಪ್ಪಿಸಿ ಸನ್ಮಾನ್ಯ ಮುಖ್ಯ ಮಂತ್ರಿಗಳೇ ಈ ಕೂಡಲೇ ಠೇವಣಿ ಇಟ್ಟ ಹಣವನ್ನು ಸಂಗೊಳ್ಳಿ ರಾಯಣ್ಣ ಅರ್ಬನ್ ಸಹಕಾರ ಸಂಸ್ಥೆಯಿಂದ ಮರುಪಾವತಿಸದಿದ್ದರೆ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ.
ಕಾರಣ ಆನಂದ ಅಪ್ಪುಗೋಳ ಆಸ್ತಿಯನ್ನು ಹರಾಜು ಹಾಕಿ ಎಲ್ಲ ಸ್ಥಿರ ಚರ ಆಸ್ತಿ ಜಪ್ತಿ ಮಾಡಿ ಅವನ ಬೇನಾಮಿ ಆಸ್ತಿ ಸರಕಾರ ಮುಟ್ಟುಗೋಲು ಹಾಕಿ, ಬಡವರ ಕಾರ್ಮಿಕರ ಮಧ್ಯಮ ವರ್ಗದವರ ಮಹಿಳೆಯರ ಹಣವನ್ನು ನ್ಯಾಯಾಲಯದ ಆದೇಶದಂತೆ ಮರು ಪಾವತಿಸಲು ನೊಂದ ಠೇವಣಿದಾರರು ಪ್ರಕಟಣೆ ಮೂಲಕ ಕೋರಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ರಮಜಾನ್ ಈದ್ ಆಚರಣೆ :ರೋಜಾ ಉಪವಾಸಕ್ಕೆ ತೆರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.