Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಧ್ಯಕ್ಷರಾಗಿ ಜಗದೇವಿ ಗುಂಡಳ್ಳಿ, ಉಪಾಧ್ಯಕ್ಷರಾಗಿ ಅಶೋಕ ಹಾರಿವಾಳ ಆಯ್ಕೆ
(ರಾಜ್ಯ ) ಜಿಲ್ಲೆ

ಅಧ್ಯಕ್ಷರಾಗಿ ಜಗದೇವಿ ಗುಂಡಳ್ಳಿ, ಉಪಾಧ್ಯಕ್ಷರಾಗಿ ಅಶೋಕ ಹಾರಿವಾಳ ಆಯ್ಕೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಸದಸ್ಯೆ ಜಗದೇವಿ ಗುಂಡಳ್ಳಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಸದಸ್ಯ ಅಶೋಕ ಹಾರಿವಾಳ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ, ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಘೋಷಿಸಿದರು.
ಪುರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಜಗದೇವಿ ಗುಂಡಳ್ಳಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು. ಸಾಮಾನ್ಯ ಸ್ಥಾನಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಸದಸ್ಯರಾದ ಅಶೋಕ ಹಾರಿವಾಳ, ನಜೀರ ಗಣಿ, ಬಿಜೆಪಿ ಪಕ್ಷದ ಸದಸ್ಯ ಅಶೋಕ ಸಂಪನ್ನವರ ನಾಮಪತ್ರ ಸಲ್ಲಿಸಿದ್ದರು. ಸದಸ್ಯ ನಜೀರ ಗಣಿ ನಾಮಪತ್ರ ಹಿಂದಕ್ಕೆ ಪಡೆದರು. ಅಶೋಕ ಹಾರಿವಾಳ ಪರವಾಗಿ ಸಚಿವ ಶಿವಾನಂದ ಪಾಟೀಲ ಸೇರಿದಂತೆ 19 ಸದಸ್ಯರು ಕೈ ಎತ್ತಿದ್ದರಿಂದ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಬಿಜೆಪಿ ಸದಸ್ಯ ಅಶೋಕ ಸಂಪನ್ನವರ ಪರ 3 ಸದಸ್ಯರು ಕೈ ಎತ್ತಿದರು. 19 ಸದಸ್ಯರ ಮತ ಪಡೆದ ಅಶೋಕ ಹಾರಿವಾಳ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಒಟ್ಟು 23 ಸದಸ್ಯ ಬಲ ಹೊಂದಿರುವ ಪುರಸಭೆ, ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಲ್ಲಿ 22 ಸದಸ್ಯರು, ಸಚಿವ ಶಿವಾನಂದ ಪಾಟೀಲ ಹಾಜರಿದ್ದರು. ಸಂಸದರು ಗೈರು ಇದ್ದರು. ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಒಬ್ಬ ಸದಸ್ಯರು ತಟಸ್ಥ ಉಳಿದರೆ, ಸದಸ್ಯೆ ಗೀತಾ ಬಾಗೇವಾಡಿ ಗೈರಾಗಿದ್ದರು ಎಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.
ಚುನಾವಣಾ ಪ್ರಕ್ರಿಯೆಯಲ್ಲಿ ಶಿರಸ್ತೇದಾರ ಎಂ.ಎಸ್.ಜಾಗೀರದಾರ, ಎಚ್.ಸಿ.ಇಂಗಳೆ, ಅನಿಲ ಅವಟಿ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ಪುರಸಭೆ ವ್ಯವಸ್ಥಾಪಕ ಸುರೇಶ ಬಾಗೇವಾಡಿ ಭಾಗವಹಿಸಿದ್ದರು.

ವಿಜಯೋತ್ಸವ

ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾಗುತಿದ್ದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ
ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಮುಖಂಡರಾದ ಲೋಕನಾಥ ಅಗರವಾಲ, ರವಿ ರಾಠೋಡ, ಶೇಖರ ಗೊಳಸಂಗಿ, ಸಂಗಯ್ಯ ಕಾಳಹಸ್ತೇಶ್ವರಮಠ, ಬಸವರಾಜ ತುಂಬಗಿ, ಮತಾಬ ಬಮ್ಮನಳ್ಳಿ, ಜಟ್ಟಿಂಗರಾಯ ಮಾಲಗಾರ, ಸಂಜೀವ ಕಲ್ಯಾಣಿ, ನಿಸಾರ ಚೌಧರಿ, ಶರಣಪ್ಪ ಬೆಲ್ಲದ, ಸಂಗನಬಸು ಪೂಜಾರಿ, ಮುತ್ತು ಗುಂಡಳ್ಳಿ, ಕಾಶೀನಾಥ ರಾಠೋಡ, ಉದಯ ಮಾಂಗಲೇಕರ, ಅಜೀಜ ಬಾಗವಾನ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.