ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿರುವುದನ್ನು ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಬಿ.ಕೆ.ಕಲ್ಲೂರ ಖಂಡಿಸಿದ್ದಾರೆ.
ಬಿಜೆಪಿ ಪಕ್ಷ ಕಟ್ಟಿ ಬೆಳೆಸುವಲ್ಲಿ ಇತರ ನಾಯಕರೊಂದಿಗೆ ಶ್ರಮಿಸುವುದರೊಂದಿಗೆ ಭ್ರಷ್ಟಾಚಾರ, ಜನರ ಮೇಲೆ ನಡೆಯುವ ಅನ್ಯಾಯದ ವಿರುದ್ದ ಧ್ವನಿ ಎತ್ತುವ ಮೂಲಕ ರಾಜ್ಯದಲ್ಲಿ ತಮ್ಮದೇಯಾದ ಛಾಪು ಮೂಡಿಸಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.
ಬಸನಗೌಡರಂತಹ ಜನನಾಯಕನನ್ನು ಬಿಜೆಪಿ ಪಕ್ಷ ಆರು ವರ್ಷಗಳ ಕಾಲ ಉಚ್ಚಾಟಿಸಿರುವ ಬಿಜೆಪಿ ಕಾರ್ಯಕರ್ತರಿಗಲ್ಲದೇ ಪಕ್ಷಾತೀತ, ಜಾತ್ಯತೀತವಾಗಿ, ಹಿಂದೂ ಬಾಂಧವರಿಗೆ ನೋವನ್ನುಂಟು ಮಾಡಿದೆ. ಬಿಜೆಪಿ ಹೈಕಮಾಂಡ್ ಕೂಡಲೇ ಪರಿಶೀಲಿಸಿ ಉಚ್ಚಾಟನೆಯನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಬಿಜೆಪಿ ಹೈಕಮಾಂಡ್ ಮತ್ತು ರಾಜ್ಯ ಕಮಿಟಿ ವಿರುದ್ಧ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

