Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮಿತಿ ಸಭೆ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮಿತಿ ಸಭೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಕಾಲುವೆ ಜಾಲಗಳ ಮೂಲಕ ಕೆರೆ ತುಂಬಿಸುವ ಸಂದರ್ಭದಲ್ಲಿ ಕುಡಿಯುವ ನೀರು ಅನ್ಯ ಕಾರ್ಯಕ್ಕೆ ಬಳಕೆ ಹಾಗೂ ನೀರು ಪೋಲಾಗದಂತೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ಜಿಲ್ಲೆಯ ವಿವಿಧ ತಾಲೂಕಾ ತಹಶೀಲ್ದಾರ, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಮಂಗವಾರ ಸಂಜೆ ವಿಡಿಯೋ ಸಂವಾದದ ಮೂಲಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿದ ಅವರು, ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕು. ಲಭ್ಯವಿರುವ ನೀರನ್ನು ಸದ್ಭಳಕೆ ಮಾಡಿಕೊಂಡು ಮುಂದಿನ ಜೂನ್‌ವರೆಗೆ ಯಾವುದೇ ಸಮಸ್ಯೆಯಾಗದಂತೆ ನೀರನ್ನು ಕಾಯ್ದಿಟ್ಟುಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಯಾವುದೇ ಅಭಾವವಾಗದಂತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು. ಜಿಲ್ಲೆಯಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವ ಅವಶ್ಯಕತೆ ಇದ್ದಲ್ಲಿ ಮುಂಚಿವಾತವಾಗಿ ಮಾಹಿತಿ ಸಲ್ಲಿಸಬೇಕು. ಅಗತ್ಯವಿದ್ದಲ್ಲಿ ಮಾತ್ರ ಟ್ಯಾಂಕರ್ ಬಳಕೆ ಮಾಡಬೇಕು ಎಂದು ಅವರು ಸೂಚನೆ ನೀಡಿದರು.
ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಒದಗಿಸಲು ಯಾವುದೇ ಅಡೆ-ತಡೆ ಉಂಟಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿಗೆ ಹೆಸ್ಕಾಂ ವತಿಯಿಂದ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಅಂಗನವಾಡಿಗಳಿಗೆ, ಸರ್ಕಾರಿ ಶಾಲೆಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದ ಅವರು, ಸ್ವಂತ ಕಟ್ಟಡ ಹೊಂದಿರುವ ಹಾಗೂ ಬಾಡಿಗೆ ಅಂಗನವಾಡಿಗಳಿಗೆ ಸಮರ್ಪಕ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಒಂದು ವಾರದೊಳಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮಾಹಿತಿ ಒದಗಿಸಬೇಕು. ಮಕ್ಕಳ ಬಗ್ಗೆ ವಿಶೇಷವಾಗಿ ಕಾಳಜಿ ವಹಿಸಿ ನೀರು ಒದಗಿಸಲು ಕ್ರಮ ವಹಿಸಬೇಕು. ನೀರಿನ ಸಮಸ್ಯೆಯಿದಲ್ಲಿ ಪರಿಹರಿಸಿಕೊಂಡು ಕುಡಿಯುವ ನೀರಿನ ಪೂರೈಕೆಗೆ ವ್ಯವಸ್ಥೆ ಮಾಡಿಕೊಂಡು ವರದಿಯ ಸಲ್ಲಿಸಬೇಕು. ಜಿಲ್ಲೆಯಲ್ಲಿರುವ ವಿವಿಧ ವಸತಿ ನಿಲಯ, ಪಶು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಹಾಗೂ ನಿರಂತರ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸುವಂತೆ ಸೂಚಿಸಿದ ಅವರು, ಕೈಗೊಂಡ ಕ್ರಮಗಳ ಕುರಿತು ಒಂದು ವಾರದೊಳಗೆ ನಿಖರ ಮಾಹಿತಿಯೊಂದಿಗೆ ಒದಗಿಸಬೇಕು. ಮುಂದೆ ಕುಡಿಯುವ ನೀರಿನ ಏನಾದರೂ ಸಮಸ್ಯೆಗಳು ಉದ್ಭವಿಸಿದ್ದಲ್ಲಿ ಸಂಬAಧಿಸಿದ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಶಿಥಿಲಾವ್ಯವಸ್ಥೆಯಲ್ಲಿರುವ ಅಂಗನವಾಡಿ ಹಾಗೂ ಶಾಲಾ ಕಟ್ಟಡಗಳ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು, ಮುಂದಿನ ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲೇ ಎಲ್ಲ ಕಟ್ಟಡಗಳ ದುರಸ್ತಿಗೊಳಿಸಲು ಕ್ರಮ ವಹಿಸಬೇಕು. ಪೂರ್ಣ ಶಿಥಿಲಾವಸ್ಥೆಗೊಂಡಿರುವ ಕಟ್ಟಡಗಳ ಬದಲಾಗಿ ಪರ್ಯಾಯ ವ್ಯವಸ್ಥೆ ಕ್ರಮ ವಹಿಸಸಬೇಕು. ಜಿಲ್ಲೆಯಲ್ಲಿ ವಿಫಲವಾಗಿರುವ ಕೊಳವೆ ಬಾವಿಗಳನ್ನು ಮುಚ್ಚಲು ಕ್ರಮ ವಹಿಸಬೇಕು. ತೆರೆದ ಬಾವಿಗಳು ಇರದಂತೆ ತೀವ್ರ ನಿಗಾ ಇಡಬೇಕು. ಯಾವುದೇ ಅನಾಹುತಗಳಿಗೆ ಆಸ್ಪದ ನೀಡದೇ ಮುಂಜಾಗ್ರತಾ ಎಲ್ಲ ತೆರೆದ ಬಾವಿಗಳನ್ನು ಮುಚ್ಚಲು ಕ್ರಮ ವಹಿಸಬೇಕು. ಹೊಸದಾಗಿ ಕೊಳವೆ ಬಾವಿ ಕೊರೆಸಲು ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಈ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ

ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ರಮಜಾನ್ ಈದ್ ಆಚರಣೆ :ರೋಜಾ ಉಪವಾಸಕ್ಕೆ ತೆರೆ
    In (ರಾಜ್ಯ ) ಜಿಲ್ಲೆ
  • ತೇಜಸ್ವಿನಿ ಅನಂತಕುಮಾರ ಗೆ ಅಕ್ಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಅಮೇರಿಕದ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿರುವ ಡಾ.ಇನಾಮದಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.