ಉದಯರಶ್ಮಿ ದಿನಪತ್ರಿಕೆ
ಬೆಂಗಳೂರು: ನಗರದ ಆಡುಗೋಡಿಯ ಪೊಲೀಸ್ ಕಾನ್ ಸ್ಟೇಬಲ್ ತುಕಾರಾಮ ಜಮಾದಾರ 2024 ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.
ಪ್ರತಿ ವರ್ಷ ಪೋಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಹಾಗೂ ವಿಶೇಷ ಸಾಧನೆಗೈದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಏಪ್ರಿಲ್ 2ರ ಪೊಲೀಸ್ ಧ್ವಜ ದಿನಾಚರಣೆಯಂದು ಮಾನ್ಯ ಮುಖ್ಯಮಂತ್ರಿಗಳು ಈ ಪದಕ ಪ್ರದಾನ ಮಾಡಲಿದ್ದಾರೆ.
ತುಕಾರಾಮ ಜಮಾದಾರ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ 67 ನೇ ಅಖಿಲ ಭಾರತ ಪೊಲೀಸ್ ಕರ್ತವ ಕೂಟದಲ್ಲಿ ಸ್ಫೋಟಕ ಪತ್ತೆ ವಿಭಾಗದಲ್ಲಿ ಸ್ಪರ್ಧಿಸಿ ಬೆಳ್ಳಿ ಪದಕವನ್ನು ಗೆದ್ದು, ಪೊಲೀಸ್ ಇಲಾಖೆಯ ಘನತೆಯನ್ನು ಹೆಚ್ಚಿಸಿದ್ದಾರೆ. ಅಲ್ಲದೇ 2 ಲಕ್ಷ ನಗದು ಬಹುಮಾನ ಕೂಡಾ ಪಡೆದಿದ್ದಾರೆ.
ಇವರ ಈ ಸೇವಾ ಸಾಧನೆಯನ್ನು ಗುರುತಿಸಿ ಸರ್ಕಾರ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆ ಮಾಡಿದೆ. ಮೂಲತಃ ಕರ್ನಾಟಕ ಗಡಿ ಭಾಗದ ಅಕ್ಕಲಕೋಟೆಯ ತುಕಾರಾಮ ಜಮಾದಾರ ಕಳೆದ 6 ವರ್ಷಗಳಿಂದ ಬೆಂಗಳೂರು ನಗರದ ಪೊಲೀಸ್ ಶ್ವಾನದಳದಲ್ಲಿ ಸ್ಪೋಟಕ ಪತ್ತೆ ವಿಭಾಗದ ಐಸು ಶ್ವಾನದ ಪರಿಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

