ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಪಟ್ಟಣದ ಶ್ರೀ ವಿಶ್ವೇಶ್ವರ ವಿದ್ಯಾ ಪ್ರಸಾರ ಸಮಿತಿಯ ಅಧ್ಯಕ್ಷರು ಹಾಗೂ ಸಮಾಜಸೇವಕರು ಶ್ರೀಶೈಲಪ್ಪ ಜೋಗೂರ ರವರಿಗೆ ಅವರ , ಶೈಕ್ಷಣಿಕ ,ಸಾಮಾಜಿಕ ಸೇವೆಯನ್ನು ಪರಿಗಣಿಸಿ ಮೈಸೂರಿನ ಕನ್ನಡ ಸಾಹಿತ್ಯ ಸಭಾಂಗಣದಲ್ಲಿ ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ ( ರಿ.) ಕರ್ನಾಟಕ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ರವರ ಸಂಯುಕ್ತ ಆಶ್ರಯದಲ್ಲಿ ಜರುಗುವ ಕರ್ನಾಟಕ ಸಾಂಸ್ಕೃತಿಕ ವೈಭವ ಸಮಾರಂಭದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸದ್ಭಾವನಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಹಾಗೂ ಉತ್ತಮ ಗುಣಮಟ್ಟದ ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡುತ್ತಿರುವ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ರಾಜ್ಯಮಟ್ಟದ ಅತ್ಯುತ್ತಮ ಶಾಲೆ ಎಂದು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭವು ಎಪ್ರಿಲ್ 10 ರಂದು ಮೈಸೂರಿನಲ್ಲಿ ಜರುಗುವುದು ಎಂದು ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ ನ ಕಾರ್ಯದರ್ಶಿ ಡಾ.ಜಿ.ಶಿವಣ್ಣ ರವರು ತಿಳಿಸಿರುತ್ತಾರೆ.
ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ವಿಶ್ವೇಶ್ವರ ವಿದ್ಯಾ ಪ್ರಸಾರ ಸಮಿತಿಯ ಕಾರ್ಯದರ್ಶಿ ಪ್ರಶಾಂತ ಬಡದಾಳ, ಕೋಶಾಧ್ಯಕ್ಷ ಅರವಿಂದ ಕುಲಕರ್ಣಿ, ಸಹ ಕಾರ್ಯದರ್ಶಿ ಅಶೋಕ ವಾರದ, ಸದಸ್ಯರಾದ ಅಲೋಕ ಬಡದಾಳ ,ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ಮುಂತಾದವರು ಹರ್ಷ ವ್ಯಕ್ತ ಪಡಿಸಿದ್ದಾರೆ.

