ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಘಟಕ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಏಪ್ರಿಲ್ ೭,೮ ಹಾಗೂ ೯ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮೂರು ದಿನಗಳವರೆಗೆ ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಏಪ್ರಿಲ್ ೭ರ ಬೆಳಿಗ್ಗೆ ೧೦ ಗಂಟೆಗೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ (ಯತ್ನಾಳ) ವಹಿಸಲಿದ್ದಾರೆ. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-೨ ಹಾಗೂ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕರಾದ ಅಪ್ಪಾಜಿ ಸಿ.ಎಸ್ ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಡಾ.ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
