ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕರ್ನಾಟಕದ ಗಾಣಿಗ ಸಮುದಾಯಕ್ಕೆ ಇಲ್ಲಿವರೆಗೂ ಕಾಂಗ್ರೆಸ್ ಪಕ್ಷ ಸಚಿವ ಸಂಪುಟದ ಸಚಿವ ಸ್ಥಾನವನ್ನು ನೀಡಿಲ್ಲ. ಹಾಗಾಗಿ ಮುಂದಿನ ಸಚಿವ ಸಂಪುಟದಲ್ಲಿ ಶಾಸಕ ಲಕ್ಷ್ಮಣ ಸವದಿ ಅವರನ್ನು ಮಂತ್ರಿ ಮಾಡಬೇಕು ಎಂದು ತಾಲೂಕು ಗಾಣಿಗ ಸಮಾಜದ ಅಧ್ಯಕ್ಷ ಮಲ್ಲಣ್ಣ ಮನಗೂಳಿ ಆಗ್ರಹಿಸಿದರು.
ಸಿಂದಗಿ ಪಟ್ಟಣದಲ್ಲಿ ಗಾಣಿಗ ಸಮಾಜದ ವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಲ್ಲು ಲೋಣಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡುವಂತೆ ರಾಜ್ಯ ಸರಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.
ಮಲ್ಲು ಲೋಣಿ ಅವರು ಪಕ್ಷ ಮತ್ತು ಸಮುದಾಯದ ಏಳಿಗೆಗಾಗಿ ದುಡದಿದ್ದಾರೆ. ಅನೇಕ ಹೋರಾಟಗಳನ್ನು ಮಾಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಸಮರ್ಥವಾಗಿ ಪ್ರತಿನಿಧಿಸಬಲ್ಲರು. ಈ ಕಾರಣಕ್ಕೆ ಲೋಣಿ ಅವರನ್ನು ನಮ್ಮೆಲ್ಲರ ಪ್ರತಿನಿಧಿಯಾಗಿ ವಿಧಾನಪರಿಷತ್ತಿಗೆ ನಾಮನಿರ್ದೇಶನ ಮಾಡಬೇಕು ಎಂದು ರಾಜ್ಯ ಸರಕಾರಕ್ಕೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಿದ್ದೇವೆ ಎಂದರು.
ಈ ವೇಳೆ ಸಂಗು ಹಿಪ್ಪರಗಿ, ಬಿ.ಹೆಚ್.ಬಿರಾದಾರ, ನಿಂಗಣ್ಣ ಮರಡಿ, ಸುರೇಶ ಚೌಧರಿ, ಪ್ರಶಾಂತಗೌಡ ಪಾಟೀಲ ಕನ್ನೊಳ್ಳಿ, ಸಿದ್ದು ಮಳಲಿ, ಮಲ್ಲು ಆನಗೊಂಡ, ರವಿ ಬಿರಾದಾರ, ಆನಂದ ಕಂಠಿಗೊಂಡ, ಸಂತೋಷ ಶಿರಕನಹಳ್ಳಿ, ಸಂತೋಷ ಬಿರಾದಾರ ಸೇರಿದಂತೆ ಅನೇಕರು ಇದ್ದರು.

