ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ವಕೀಲ ಎಂ.ಡಿ.ಕುಂಬಾರ ಬುಧವಾರ ಜಿಲ್ಲಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಪಕ್ಷ ಕೊಟ್ಟ ಹಲವಾರು ಜವಾಬ್ದಾರಿಗಳನ್ನು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ನಿಭಾಯಿಸಿದ್ದೇನೆ. ಸದ್ಯದ ಕಲುಷಿತ ರಾಜಕೀಯ ಪರಿಸ್ಥಿತಿಯಲ್ಲಿ ಬಹುದೊಡ್ಡ ನಾಯಕ ಬಸನಗೌಡ ಪಾಟೀಲ ಯತ್ನಾಳ ರವರನ್ನು ಉಚ್ಛಾಟನೆ ಮಾಡಿರುವ ನಿರ್ಧಾರ ಖಂಡಿಸಿ ಭಾರವಾದ ಮನಸ್ಸಿನಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
