ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರಯಾಣಿಕರ ಅಹವಾಲು ಕುಂದುಕೊರತೆಗಳನ್ನು ಆಲಿಸಲು ಏ.೦೭ರಂದು ಮಧ್ಯಾಹ್ನ ೩-೩೦ರಿಂದ ೪-೩೦ರವರೆಗೆ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ದೂರವಾಣಿ ಸಂಖ್ಯೆ : ೬೩೬೬೪೨೩೮೮೭ಗೆ ಸಾರ್ವಜನಿಕರು ಕರೆ ಮಾಡಿ ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಫೋನ್‌ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
