ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ನಿರುದ್ಯೋಗಿ ಯುವಕ/ ಯುವತಿಯರಿಗೆ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಬೆಂಗಳೂರು ರವರ ಪ್ರಾದೇಶಿಕ ಕೇಂದ್ರಗಳ ಸಹಯೋಗದೊಂದಿಗೆ ಆಯೋಜಿಸಿರುವ ೨೦೨೪-೨೫ನೇ ಸಾಲಿನ ವಿವಿಧ ಕೌಶಲ್ಯಾಭಿವೃದ್ಧಿ (ತಾಂತ್ರಿಕ ನೈಪುಣ್ಯತೆ) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸೆಲ್ಫ್ ಎಂಪ್ಲೊಯಡ್ ಟ್ರೆನಿಂಗ್, ಅಸಿಸ್ಟೆಂಟ್ ಬ್ಯೂಟಿ ಥೆರಪಿಸ್ಟ್ ಹಾಗೂ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪ್ರೆಟರ್ ಗಳ ೨ ತಿಂಗಳ ತರಬೇತಿ, ಪ್ಯಾಷನ್ ಡಿಸೈನರ್ ನ ೧ ತಿಂಗಳ ತರಬೇತಿ ಆಗಿದ್ದ್ದು, ಆಸಕ್ತ ಜಿಲ್ಲೆಯ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆ, ವಿಜಯಪುರದ ಉಪನಿರ್ದೇಶಕರ ಕಚೇರಿ ಹಾಗೂ ವಿಜಯಪುರ, ಇಂಡಿ, ಬಸವನ ಬಾಗೇವಾಡಿ, ಸಿಂದಗಿ, ಮುದ್ದೇಬಿಹಾಳ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
