ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ವೈಷ್ಣವಿ ಹಿರೇಮಠ ಇವಳು ಸುವರ್ಣ ಕರ್ನಾಟಕ ನಾಟ್ಯ ಮಯೂರಿ ಪ್ರತಿಭಾ ಪುರಸ್ಕಾರಕ್ಕೆ ಭಾಜನಳಾಗಿದ್ದಾಳೆ.
ಬೆಂಗಳೂರಿನ ಸಮಾಜ ಕಲ್ಯಾಣ ಸಂಸ್ಥೆ ಹಾಗೂ ವಿಶ್ವ ಕನ್ನಡ ಜಾನಪದ ಪರಿಷತ್ ಇವುಗಳಡಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ನ ಅಕ್ಕಮಹಾದೇವಿ ಸಭಾಭವನದಲ್ಲಿ ದಿ: ೬ ರಂದು ಆಯೋಜಿಸಿದ ರಾಷ್ಟೀಯ ಮಹಿಳಾ ಪ್ರತಿಭೋತ್ಸವದಂದು, ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಂಸ್ಥೆಯ ಅಧ್ಯಕ್ಷೆ ವೀಣಾ ಕಿಡದಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.