Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಚಲನವಲನದ ಮೇಲೆ ಪಾಲಕರು ನಿಗಾವಹಿಸಿ :ನಾಗರತ್ನ
(ರಾಜ್ಯ ) ಜಿಲ್ಲೆ

ಮಕ್ಕಳ ಚಲನವಲನದ ಮೇಲೆ ಪಾಲಕರು ನಿಗಾವಹಿಸಿ :ನಾಗರತ್ನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಮಕ್ಕಳ ವಿದ್ಯಾಭ್ಯಾಸದಲ್ಲಿ ಶಾಲೆಯ ಶಿಕ್ಷಕರದಷ್ಟೇ ಮಹತ್ವದ ಪಾತ್ರವಲ್ಲ. ಪಾಲಕರ ಪಾತ್ರವು ಹಿರಿದಾದದ್ದು ಎಂದು ನಾಗರತ್ನ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಕಿಡ್ಜಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡ ವಾರ್ಷಿಕ ಸಂಸ್ಕಾರ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳ ವಿದ್ಯಾಭ್ಯಾಸದ ಜೊತೆಗೆ ಅವರ ಚಲನ ವಲನದ ಮೇಲೆ ಪಾಲಕರು ನಿಗಾವಹಿಸಬೇಕು. ಪ್ರಾಥಮಿಕ ಹಂತ ಮಕ್ಕಳ ಬೆಳವಣಿಗೆಗೆ ಭದ್ರ ಬುನಾದಿ ಇದ್ದಂತೆ. ಮಕ್ಕಳು ಎಳ ವಯಸ್ಸಿನಲ್ಲಿಯೇ ಉತ್ತಮ ಸಂಸ್ಕಾರದ ಅಡಿಪಾಯ ಹಾಕುವಲ್ಲಿ ಪಾಲಕ, ಶಿಕ್ಷಕರು ಒಂದೇ ನಾಣ್ಯದ ಎರಡು ಮುಖಗಳಂತೆ ಕಾರ್ಯನಿರ್ವಹಿಸಬೇಕು. ಮಕ್ಕಳ ದೈಹಿಕ, ಮಾನಸಿಕ ಶ್ರೇಯೋಭಿವೃದ್ಧಿಗೆ ಶಾಲೆ ಆವರಣದ ಪರಿಸರವು ಪರಿಣಾಮ ಬೀರುತ್ತದೆ. ಈ ಶಾಲೆಯಲ್ಲಿ ಮಕ್ಕಳ ಪ್ರಗತಿಗೆ ಪೂರಕ ವಾತರಣವಿರುವುದು ತುಂಬಾ ಹರ್ಷ ತಂದಿದೆ. ಕೇವಲ ಎರಡೇ ವರ್ಷದಲ್ಲಿ ಶಾಲೆ ಇಷ್ಟೋಂದು ಎತ್ತರಕ್ಕೆ ಬೆಳೆಯಬೇಕಾದರೆ ಶಾಲಾ ವ್ಯವಸ್ಥಾಪಕ ಮಂಡಳಿಯ ಜೊತೆಗೆ ಸಿಬ್ಬಂದಿಗಳ ಶ್ರಮವೂ ಪ್ರಮುಖವಾಗಿದೆ ಎಂದರು.
ಈ ವೇಳೆ ಅತಿಥಿಯಾಗಿ ಭಾಗವಹಿಸಿದ ಪಿಎಸ್‌ಐ ಆರೀಫ್ ಮುಷಾಪುರಿ ಅವರು ಮಾತನಾಡಿ, ಮಕ್ಕಳು ತಂದೆ-ತಾಯಿ ಮತ್ತು ಹಿರಿಯರನ್ನು ಪ್ರೀತಿಸಿ ಗೌರವಿಸುವುದರ ಜೊತೆಗೆ ಜ್ಞಾನಾರ್ಜನೆಯ ಬುತ್ತಿಯನ್ನು ಉಣಬಡಿಸಿದ ಶಿಕ್ಷಕರ ಮಾರ್ಗದರ್ಶನದಲ್ಲಿ ನಡೆಯಬೇಕು. ಮಕ್ಕಳು ಕಷ್ಟಪಟ್ಟು ಓದಿ ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಭೀಮಾಶಂಕರ ಮಠದ ದತ್ತಪ್ಪಯ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಆನಂದ ಶಾಬಾದಿ ಮಾತನಾಡಿದರು.
ಶಾಲೆಯ ಮಕ್ಕಳಿಂದ ವಿವಿಧ ನೃತ್ತ, ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ರಾಜು ಬಸಯ್ಯ ಗುತ್ತೇದಾರ, ಜ್ಯೋತಿ ರಾಜು ಗುತ್ತೇದಾರ, ಡಾ.ರಶ್ಮೀ ಸುನೀಲ ಪಾಟೀಲ, ಡಾ.ನೂರೈನ್ ಮೋಗಲಾಯಿ, ವೆಂಕಟೇಶ ಗುತ್ತೇದಾರ, ವಿಪಲಾ ವೆಂಕಟೇಶ ಗುತ್ತೇದಾರ, ಶಿವು ಆಲಮೇಲ, ಜಗದೀಶ ಮದರಿ ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಹಾಗೂ ಪಾಲಕ ವರ್ಗ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.