ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸರ್ಕಾರದ ಆದೇಶದಂತೆ ೨೦೨೫ನೇ ಸಾಲಿನ ಏಪ್ರಿಲ್ ಮತ್ತು ಮೇ ಮಾಹೆಯಲ್ಲಿ ಬೆಳಿಗ್ಗೆ ೦೮ ಗಂಟೆಯಿಂದ ಮಧ್ಯಾಹ್ನ ೦೧:೩೦ಗಂಟೆವರೆಗೆ ಕಚೇರಿ ಕೆಲಸದ ಅವಧಿ ಬದಲಾವಣೆ ಮಾಡಿ ಆದೇಶಿಸಲಾಗಿದೆ. ಸದರಿ ಆದೇಶದಂತೆ ಉಪ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಬದಲಾದ ಸಮಯದಲ್ಲಿ ಕಚೇರಿಯು ಕಾರ್ಯನಿರ್ವಹಿಸಲಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
