ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕೂಡಗಿಯ ಸಂಗನಬಸವೇಶ್ವರ ಕಲಾ ಮತ್ತು ವಾಣಿಜ್ಯ ಕಾಲೇಜ್ ಇವರ ಸಹಯೋಗದೊಂದಿಗೆ ಮಾ.೨೦ ರಂದು ಸಂಗನಬಸವೇಶ್ವರ ಕಲಾ ಮತ್ತು ವಾಣಿಜ್ಯ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕೋಲ್ಹಾರ ತಾಲೂಕಿನ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಸಂತೋಷ ಗಣಾಚಾರಿ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಪದವಿಧರರಿಗೆ ರೂ.೩೦೦೦ ಮತ್ತು ಡಿಪ್ಲೋಮಾದಾರರಿಗೆ ರೂ.೧೫೦೦ ಯುವನಿಧಿ ಯೋಜನೆಯಡಿ ನೀಡಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳು ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡು ಯೋಜನೆಯ ಸದುಪಯೋಗ ಪಡೆಯುವಂತೆ ಅವರು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಬಸವರಾಜ ಕೊಲ್ಹಾರ, ಇಂಧುದರ ಹೊಸಮಠ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ಉದ್ಯೋಗಾಧಿಕಾರಿಗಳಾದ ಸೋಮಶೇಖರ ಆಲಮೇಲ, ಕೊಲ್ಹಾರ ತಾಲೂಕಿನ ಪಂಚ ಗ್ಯಾರಂಟಿ ಸದಸ್ಯರುಗಳು ಹಾಗೂ ಕಾಲೇಜಿನ ಅಧ್ಯಾಪಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

