ಸದುಪಯೋಗಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಹಾಗೂ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಎಸ್. ಎಸ್. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಚಡಚಣ ಇವರ ಸಹಯೋಗದಲ್ಲಿ ದಿನಾಂಕ: ೦೭-೦೪-೨೦೨೫ ರಂದು ಬೆಳಿಗ್ಗೆ ೯.೩೦ ರಿಂದ ಸಾಯಂಕಾಲ ೪.೦೦ ಘಂಟೆಯವರೆಗೆ ಜಿಲ್ಲೆಯ ಚಡಚಣದ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಎಸ್. ಎಸ್. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ೪೦ ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಈವರೆಗೆ ಪ್ರತಿಷ್ಠಿತ ೩೦ ಕಂಪನಿಯವರು ನೋಂದಣಿ ಮಾಡಿಕೊಂಡಿರುತ್ತಾರೆ.ಈ ಮೇಳದಲ್ಲಿ ಎಸ್.ಎಸ್.ಎಲ್.ಸಿ/ಪಿಯುಸಿ/ಐಟಿಐ/ ಡಿಪ್ಲೊಮಾ/ಪದವಿ/ ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಪದವೀಧರರಿಗೆ (ಃಂ/B.Sಛಿ.B.ಇಜ) ಅವಕಾಶವಿರುತ್ತದೆ.
ನೋಂದಣಿ ಉಚಿತವಾಗಿದ್ದು, ೧೭೨೬ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಆಸಕ್ತ ಅಭ್ಯರ್ಥಿಗಳು ಕ್ಯೂ ಆರ್ ಕೋಡ್ ಮೂಲಕವೂ ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೌಶಲ್ಯ ಮಿಷನ್ ಅಧ್ಯಕ್ಷರೂ ಆದ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

