ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರ ವತಿಯಿಂದ ಜಿಲ್ಲೆಯ ತಿಕೋಟಾ ತಾಲೂಕಿನ ಕನಮಡಿ ಗ್ರಾಮದಲ್ಲಿ ನಿರ್ಮಿಸಲಾದ ೨x೧೦ ಎಂವಿಎ.೧೧೦/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಕನಮಡಿ ಗ್ರಾಮದಲ್ಲಿ ಏ.೫ರಂದು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೧೦ ಗಂಟೆಗೆ ಬೃಹತ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಇಂಧನ ಖಾತೆ ಸಚಿವರಾದ ಕೆ.ಜೆ.ಜಾರ್ಜ್, ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ರಾಜ್ಯ ಸಭಾ ಸದಸ್ಯೆ ಡಾ.ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.
