ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಔಷಧ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಬುಧವಾರ-ಗುರುವಾರ ಎರಡು ದಿನಗಳ ಕಾಲ ಬೆಂಗಳೂರಿನ ಮೈಕ್ರೋ ಲ್ಯಾಬ್ಸ್ ಲಿಮಿಟಡ್ ಕೈಗಾರಿಕಾ ವಲಯಕ್ಕೆ ಭೇಟಿ ನೀಡಿ ಕ್ಷೇತ್ರಕಾರ್ಯ ಕೈಗೊಂಡರು.
ಕ್ಷೇತ್ರ ಕಾರ್ಯದಲ್ಲಿ ವಿದ್ಯಾರ್ಥಿಗಳು ಔಷಧಿಗಳ ತಯಾರಿ, ಗುಣಮಟ್ಟ ಪರೀಕ್ಷೆ, ಸಂಸ್ಕರಣೆ, ಬಾಳಿಕೆ ಹಾಗೂ ಗುಣಮಟ್ಟದ ಭರವಸೆಯ ತಯಾರಿಕೆಯ ಕುರಿತು ಉಪಯುಕ್ತ ಮಾಹಿತಿ ಪಡೆದುಕೊಂಡರು. ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಸಿ.ಸಿ.ಸಿಂಪಿ ಅವರು ಔಷಧ ಕ್ಷೇತ್ರದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಸಾಧನೆ ಮಾಡಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕಾದರೆ ತಮ್ಮ ಅಧ್ಯಯನದೊಂದಿಗೆ ಕ್ಷೇತ್ರಕಾರ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳನ್ನು ಕ್ಷೇತ್ರಕಾರ್ಯಕ್ಕೆ ಕರೆದುಕೊಂಡು ಹೋಗಲಾಗಿತ್ತು ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪ್ರೊ.ಮಹಾಂತೇಶ ಕವಟೇಕರ, ಪ್ರೊ.ಲಕ್ಷ್ಮಣ ಬಿರಾದಾರ, ಡಾ.ರೇಣುಕಾ ಕಬಾಡೆ ಇತರರು ಇದ್ದರು.

