Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಎಲ್ಡಿಇ ಸಂಸ್ಥೆಯಿಂದ ಉತ್ತರ ಕರ್ನಾಟಕ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಕ್ರಮ
(ರಾಜ್ಯ ) ಜಿಲ್ಲೆ

ಬಿಎಲ್ಡಿಇ ಸಂಸ್ಥೆಯಿಂದ ಉತ್ತರ ಕರ್ನಾಟಕ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಕ್ರಮ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಎಲ್ಡಿಇ ಸಂಸ್ಥೆ ಪ್ರ.ಕಾರ್ಯದರ್ಶಿ ಮತ್ತು ಎಂಎಲ್ಸಿ ಸುನೀಲಗೌಡ ಪಾಟೀಲರಿಂದ ಎರಡು ಮಹತ್ವದ ಒಡಂಬಡಿಕೆಗಳಿಗೆ ಸಹಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆ ಮತ್ತು ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಯುವ ಹಾಗೂ ಹೊಸ ಉದ್ಯಮಿಗಳಿಗೆ ಅನುಕೂಲವಾಗಲು ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಫೌಂಡೇಶನ್ ಫಾರ್ ಇನ್ನೋವೇಶನ್ ಆ್ಯಂಡ್ ಇನಕ್ಯೂಬೇಶನ್ ಕೇಂದ್ರವು ಹುಬ್ಬಳ್ಳಿಯ ಇನ್ನೋವಾಸ್ಕೇಪ್ ಎಲ್.ಎಲ್.ಪಿ ಮತ್ತು ವಿಜಯಪುರ ನಗರದ ಇನ್ನೋವೇಟಮ್ ಜೊತೆ ಪ್ರತ್ಯೇಕ ಒಡಂಬಡಿಕೆ ಮಾಡಿಕೊಂಡಿದೆ.
ಶುಕ್ರವಾರ ಬಿ.ಎಲ್.ಡಿ.ಇ ಸಂಸ್ಥೆಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರು ಎರಡು ಮಹತ್ವದ ಒಡಂಬಡಿಕೆಗಳಿಗೆ ಸಹಿ ಹಾಕಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ ಶಾಸಕ ಸುನೀಲಗೌಡ, ಬಿ.ಎಲ್.ಡಿ.ಇ ಸಂಸ್ಥೆ ಯಾವಾಗಲೂ ವಿಜಯಪುರ ಮತ್ತು ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಯುವಕರ ಅಭ್ಯುದಯಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಭಾಗದ ವಿದ್ಯಾರ್ಥಿಗಳು ಮತ್ತು ಪ್ರತಿಭಾವಂತ ಯುವಕರು ಕೌಶಲ್ಯಯುತ ಶಿಕ್ಷಣ ಮತ್ತು ತರಬೇತಿಗಾಗಿ ಮಹಾನಗರಗಳಿಗೆ ತೆರಳಲು ಅಪಾರ ಹಣ ಖರ್ಚಾಗುತ್ತದೆ. ಇದನ್ನು ಮನಗಂಡು ನಮ್ಮ ಜಿಲ್ಲೆಯಲ್ಲಿಯೇ ವಿದ್ಯಾರ್ಥಿಗಳಿಗೆ ಶಾಲೆ ಮತ್ತು ಕಾಲೇಜು ಓದುವಾಗಲೇ ಕೌಶಲ್ಯಾಭಿವೃದ್ಧಿ, ತರಬೇತಿ, ನಾವಿಣ್ಯತೆ, ಸಂಶೋಧನೆ, ಮೂಲ ಮಾದರಿ ಮುಂತಾದ ವಿಷಯಗಳಲ್ಲಿ ಶಿಕ್ಷಣದ ಜೊತೆಗೆ ತರಬೇತಿ ಪಡೆಯಲು ಇನೋವೇಶನ್ ಮತ್ತು ಇನಕ್ಯೂಬೇಶನ್ ಸೆಂಟರ್ ಪ್ರಾರಂಭಿಸಿದೆ. ಈಗ ಮಾಡಿಕೊಳ್ಳಲಾದ ಒಡಂಬಡಿಕೆಯಿಂದಾಗಿ ವಿಜಯಪುರ ಮತ್ತು ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಯುವಕರರಿಗೆ ಸಾಕಷ್ಟು ಅನುಕೂಲವಾಗಲಿದೆ. ಇದನ್ನು ಸದುಪಯೋಗ ಪಡಿಸಿಕೊಂಡು ಉದ್ಯಮಿಗಳಾಗಬೇಕು ಎಂದು ಕರೆ ನೀಡಿದರು.
ಮೊದಲ ಒಡಂಬಡಿಕೆಯಲ್ಲಿ ಶಾಸಕ ಸುನೀಲಗೌಡ ಪಾಟೀಲ ಮತ್ತು ಹುಬ್ಬಳ್ಳಿಯ ಇನ್ನೊವಾಸ್ಕೇಪ್ ಎಲ್.ಎಲ್.ಪಿ ಸಂಸ್ಥೆಯ ಸಂಸ್ಥೆಯ ಸಹಸಂಸ್ಥಾಪಕ ಮತ್ತು ಮ್ಯಾನೇಜಿಂಗ್ ಪಾರ್ಟನರ್ ರೋಹಿತ್ ಆರ್. ವಿ ಸಹಿ ಹಾಕಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಫೌಂಡೇಶನ್ ನ ಅಸೋಸಿಯೇಟ್ ಆಶೀಶ ಕುಲಕರ್ಣಿ, ಸುಪ್ರೀಯ ಬಿರಾದಾರ ಹಾಗೂ ಹುಬ್ಬಳ್ಳಿಯ ಸುಪ್ರೀಯಾ ವೈದ್ಯ ಉಪಸ್ಥಿತರಿದ್ದರು.
ಹುಬ್ಬಳ್ಳಿಯ ಇನ್ನೋವಾಸ್ಕೇಪ್ ಸಂಸ್ಥೆ ಹುಬ್ಬಳ್ಳಿ- ಧಾರವಾಡ, ಬೆಳಗಾವಿಗಳಲ್ಲಿ ನಾನಾ ಎಂಜಿನಿಯರಿಂಗ್ ಮತ್ತು ವಾಣಿಜ್ಯ ಕಾಲೇಜುಗಳು ಹಾಗೂ ಶಿಕ್ಷಣ ಸಂಸ್ಥೆಗಳ ಜೊತೆ ಈಗಾಗಲೇ ಒಡಂಬಡಿಕೆ ಮಾಡಿಕೊಂಡಿದೆ.
ಎರಡನೇ ಒಡಂಬಡಿಕೆಗೆ ಶಾಸಕ ಸುನೀಲಗೌಡ ಪಾಟೀಲ ಮತ್ತು ವಿಜಯಪುರದ ಇನ್ನೊವೇಟಮ್ ಸಂಸ್ಥೆಯ ಸಹಸಂಸ್ಥಾಪಕ ಶೌಕತ್ ಕೋತ್ವಾಲ ಸಹಿ ಹಾಕಿದರು. ಈ ಇನ್ನೊವೇಟಮ್ ಸಹಸಂಸ್ಥಾಪಕ ಸಂದರ್ಭದಲ್ಲಿ ಅಬ್ದುಲ್ ರಹೀಂ ಸುತಾರ, ಆಶೀಶ ಕುಲಕರ್ಣಿ ಮತ್ತು ಸುಪ್ರೀಯಾ ಬಿರಾದಾರ ಉಪಸ್ಥಿತರಿದ್ದರು. ವಿಜಯಪುರದ ಈ ಸಂಸ್ಥೆ ಇಂಟರ್ನೆಟ್ ಸಂಬಂಧಿತ ನಾನಾ ವಿಷಯಗಳ ಕುರಿತು ವೃತ್ತಿ ನೈಪುಣ್ಯತೆ ಮತ್ತು ಕೌಶಲ್ಯಾಭಿವೃದ್ಧಿ ಕುರಿತು ತರಬೇತಿ ನೀಡುತ್ತಿದೆ.
ಈ ಎರಡೂ ಒಡಂಬಡಿಕೆಯಿಂದಾಗಿ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಫೌಂಡೇಶನ್ ಫಾರ್ ಇನ್ನೋವೇಶನ್ ಆ್ಯಂಡ್ ಇನಕ್ಯೂಬೇಶನ್ ಕೇಂದ್ರದಲ್ಲಿ ವಿಜಯಪುರ ಮತ್ತು ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಯುವಕರಿಗೆ ಇನ್ನು ಮುಂದೆ ವಿಶೇಷ ತರಬೇತಿ ಶಿಬಿರ ಮತ್ತು ಕಾರ್ಯಾಗಾರಗಳು ನಡೆಯಲಿವೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.