Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿನಯ್‌ ಆತ್ಮಹತ್ಯೆ ಪ್ರಕರಣ: ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ
(ರಾಜ್ಯ ) ಜಿಲ್ಲೆ

ವಿನಯ್‌ ಆತ್ಮಹತ್ಯೆ ಪ್ರಕರಣ: ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪಾರದರ್ಶಕ ತನಿಖೆಗೆ ಬಿಜೆಪಿ ಆಗ್ರಹ | ಶಾಸಕ ಪೊನ್ನಣ್ಣ ಬಂಧನಕ್ಕೆ ಒತ್ತಾಯ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, ಶಾಸಕ ಪೊನ್ನಣ್ಣ ಬಂಧನಕ್ಕೆ ಆಗ್ರಹಿಸಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಅಭಿವೃದ್ಧಿಯ ಬಗ್ಗೆ ಪ್ರಶ್ನಿಸಿದರು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದೆ ಕೊಲೆಗಡುಕ ಕಾಂಗ್ರೆಸ್ ಸರ್ಕಾರ. ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ, ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ ಅವರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರ ಮೇಲೆ ಇಲ್ಲಸಲ್ಲದ ಕೇಸು ಹಾಕಿ, ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿದೆ.
ಅಲ್ಲದೆ, ವಿನಯ್‌ ಸೋಮಯ್ಯ ಅವರ ಕೊಲೆಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ, ಮಂಥರ್‌ ಗೌಡ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪೋಸ್ಟ್ ಮಾಡಿ, ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಲಂಕುಶವಾಗಿ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕಿದೆ ಎಂದು ಹೇಳಿದ್ದಾರೆ.
ರಾಜಕೀಯ ಕಾರಣಗಳು ಹಾಗೂ ಒತ್ತಡಗಳ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಎಫ್ಐಆರ್ ನಿಂದಾಗಿ ವಿನಯ್ ಆತ್ಮಹತ್ಯೆಗೆ ಶರಣಾಗಿರಬಹುದಾದ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬರುತ್ತಿದ್ದು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯ ಕಿರುಕುಳ, ಒತ್ತಡ, ದೌರ್ಜನ್ಯಗಳು ನಡೆಯುತ್ತಿದೆ. ಈ ನಿಟ್ಟಿನಲ್ಲಿ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯು ಅತ್ಯಂತ ಪಾರದರ್ಶಕವಾಗಿ ನಡೆಯಬೇಕೆಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

“ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಒತ್ತಡ ಉಂಟಾಗಲು ಕಾರಣರಾದವರ ವಿರುದ್ಧ ರಾಜ್ಯ ಸರ್ಕಾರ ಈ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮೃತ ಕಾರ್ಯಕರ್ತ ವಿನಯ್ ಅವರ ನಿಧನದ ನೋವಿನಲ್ಲಿರುವ ಕುಟುಂಬ ವರ್ಗದವರಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ವಿನಯ್ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ.”

– ಬಿ.ವೈ.ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷರು

“ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಎಂಬುವವರು ಕಾಂಗ್ರೆಸ್ ನ ಕೆಲ ರಾಜಕಾರಣಿಗಳು ತಮ್ಮ ಅಧಿಕಾರವನ್ನು ಉಪಯೋಗಿಸಿ ಬೆದರಿಕೆಯೊಡ್ಡಿದ್ದ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುರದೃಷ್ಟಕರ. ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿ ಕರ್ನಾಟಕ ಘಟಕವು ವಿನಯ್ ಅವರಿಗೆ ಯಾವುದೇ ಕಾನೂನು ನೆರವು ನೀಡದೆ ಈಗ ಟ್ವಿಟ್ಟರ್ನಲ್ಲಿ ಆರ್ಭಟಿಸುತ್ತಿರುವುದು ಇವರ ಆದ್ಯತೆಗಳನ್ನು ತೋರಿಸುತ್ತದೆ. ಈಗಲಾದರೂ ಬಿಜೆಪಿ ನಾಯಕರು ಅಡ್ಜಸ್ಟ್ಮೆಂಟ್ ಮಾಡಿಕೊಳ್ಳದೆ ವಿನಯ್ ಆತ್ಮಕ್ಕೆ ಶಾಂತಿ ಸಿಗುವುದಕ್ಕಾಗಿ ಹೋರಾಟ ಮಾಡಲಿ. ಈ ಹೋರಾಟಕ್ಕೆ ನನ್ನ ಬೆಂಬಲವಿದೆ.”

– ಬಸನಗೌಡ ಪಾಟೀಲ, ಯತ್ನಾಳ
ಶಾಸಕರು, ವಿಜಯಪುರ

BIJAPUR NEWS congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.