ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹಸಿರು ಕ್ರಾಂತಿಯ ಹರಿಕಾರ ದೇಶದ ಮಾಜಿ ಉಪ ಪ್ರಧಾನ ಮಂತ್ರಿಗಳಾದ ಡಾ.ಬಾಬು ಜಗಜೀವನರಾಂ ಅವರ ೧೧೮ನೇ ಜನ್ಮ ದಿನಾಚರಣೆ ಅಂಗವಾಗಿ ಶನಿವಾರ ನಗರದ ಸೈಟಲೈ ಬಸ್ ನಿಲ್ದಾಣ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಖಾತೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭಧಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

