Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿಪ್ರಕರಣ ಸತ್ಯಕ್ಕೆ ದೂರ :ಪತ್ರಕರ್ತ ನಿಂಗರಾಜ
(ರಾಜ್ಯ ) ಜಿಲ್ಲೆ

ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿಪ್ರಕರಣ ಸತ್ಯಕ್ಕೆ ದೂರ :ಪತ್ರಕರ್ತ ನಿಂಗರಾಜ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕಳೆದ ತಿಂಗಳು ಸಿಂದಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು ನಕಲಿ ಪತ್ರಕರ್ತರು, ನಮಗೆ ಕಿರುಕುಳ ಅವಾಚ್ಯ ಶಬ್ದಗಳಿಂದ ಬಯುತ್ತಿದ್ದಾರೆ ಎಂದು ಹೇಳಿ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿರುತ್ತಾರೆ. ಆದರೆ ಅವರು ಮಾಡಿರುವ ಪ್ರಕರಣ ಸತ್ಯಕ್ಕೆ ದೂರವಾದದ್ದು ಎಂದು ಪತ್ರಕರ್ತ ನಿಂಗರಾಜ ಅತನೂರ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಹಲವಾರು ವರ್ಷಗಳಿಂದ ನಾನು ಪತ್ರಿಕಾ ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸಮಸ್ಯೆಗಳ ಸರಮಾಲೆ ಇದೆ. ನೀವು ಯಾಕೆ ಇತ್ತ ಕಡೆ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ನಮ್ಮ ಬಳಿ ಹೇಳಿಕೊಂಡಾಗ ನಾವುಗಳು ನೇರವಾಗಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಜೊತೆಗೆ ಮಾತನಾಡಬಾರದು ಎಂಬ ಉದ್ದೇಶದಿಂದ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಮಾಹಿತಿ ಕೇಳಿದ್ದೇವೆ. ಸುಮಾರು ದಿನಗಳಾದ ಬಳಿಕ ಮಾಹಿತಿ ನೀಡಲಿಲ್ಲ. ಅಲ್ಲಿನ ಸಿಬ್ಬಂದಿಗಳ ಜೊತೆಗೆ ಅಸಭ್ಯವಾಗಿ ವರ್ತನೆ ಮಾಡಿದ್ದೇವೆ ಎಂದು ಅವರು ದೂರು ದಾಖಲಿಸಿದ್ದಾರೆ. ಅದು ಸತ್ಯಕ್ಕೆ ದೂರವಾಗಿದ್ದು, ಸಮಾಜದ ಒರೆಕೋರೆಗಳನ್ನು ತಿದ್ದುವ ಪತ್ರಕರ್ತರಿಗೆ ಈ ರೀತಿಯಾದರೆ ಇನ್ನೂ ಜನ ಸಾಮಾನ್ಯರ ಪಾಡೇನು? ಸರಕಾರಿ ಸೇವೆ ಮಾಡಲು ಬಂದ ಅಧಿಕಾರಿಗಳು ಸೇವೆ ಮಾಡುವುದು ಬಿಟ್ಟು ದಬ್ಬಾಳಿಕೆ ಮಾಡುತ್ತಿದ್ದಾರೆ. ಪ್ರಶ್ನೆ ಮಾಡದಿರುವಷ್ಟು ವೈದ್ಯರು ಬಲಿಷ್ಟವಾಗಿದ್ದಾರೆ ಎಂದರೆ ಆಸ್ಪತ್ರೆಗೆಂದು ಬರುವ ರೋಗಿಗಳ ಹಣೆಬರಹ ಹೇಗೆ? ಎಂದು ಪ್ರಶ್ನಿಸಿದರು.
ನಮ್ಮ ಮೇಲೆ ಆಸ್ಪತ್ರೆಯ ಸಿಬ್ಬಂದಿ ಮಾಡಿರುವ ಆರೋಪ ಸುಳ್ಳಿದೆ. ಅಲ್ಲಿ ಸುಮಾರು ೩೫ ಸಿಸಿ ಟಿವಿ ಕ್ಯಾಮರ್‌ಗಳಿವೆ, ಅವುಗಳನ್ನು ನೋಡಿ ಸಂಪೂರ್ಣ ತನಿಖೆ ಮಾಡಿ. ತಪ್ಪು ಯಾರದಿದೆ ಎಂದು ಪರಿಗಣಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು. ಪೊಲೀಸ್ ಅಧಿಕಾರಿಗಳು ನಮ್ಮದು ಒಂದು ಕೌಂಟರ್ ಕೇಸ್ ದಾಖಲು ಮಾಡಿಕೊಂಡು ಸತ್ಯ ಅಸತ್ಯತೆ ಏನೆಂಬುದನ್ನು ತನಿಖೆ ಮಾಡಬೇಕು ಎಂದರು.
ಕಳೆದ ತಿಂಗಳ ತಾಲೂಕು ಸಾರ್ವಜನಿಕ ಆಸ್ಪತ್ರಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಸಮಸ್ಯೆ ಮತ್ತು ಒಂದು ಬಾಣಂತಿ ಸಾವಿನ ವಿಷಯದ ಬಗ್ಗೆ ಅವರ ಜೊತೆಗೆ ಚರ್ಚೆ ಮಾಡಿದ ಸಲುವಾಗಿ ಈ ರೀತಿಯಾಗಿ ನಮ್ಮ ಮೇಲೆ ಗೂಬೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ನಿಂಗರಾಜ ಆರೋಪಿಸಿದರು.
ಈ ವೇಳೆ ಇನ್ನೋರ್ವ ಪತ್ರಕರ್ತ ಶಿವಕುಮಾರ ಬಿರಾದಾರ ಮಾತನಾಡಿ, ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಸರಿಯಾಗಿ ಬರುತ್ತಿಲ್ಲ ಎಂದು ಸಾರ್ವಜನಿಕರಿಂದ ಮಾಹಿತಿ ತಿಳಿದಾಗ ಮಾಹಿತಿ ಹಕ್ಕು ಅಧಿನಿಯಮದಡಿ ನ.೧೪ರಂದು ಆಸ್ಪತ್ರೆಯ ೬ಜನ ಸಿಬ್ಬಂದಿಗಳ ಸಂಬಳ ಮತ್ತು ಬಯೋಮೆಟ್ರಿಕ್ ಹಾಜರಾತಿ ನಕಲು ಪ್ರತಿ ಒದಗಿಸುವಂತೆ ಮಾಹಿತಿ ಕೇಳಲಾಯಿತು. ಕೊಡುವುದಕ್ಕೆ ಬರುವುದಿಲ್ಲ ಎಂದು ಹೇಳಿದರು. ಅದಕ್ಕೆ ಹಿಂಬರಹ ನೀಡಿ ಎಂದಾಗ ನ.೨೭ರಂದು ನೀಡಿದರು. ಬರದೆ ಇರುವುದಕ್ಕೆ ಉತ್ತರ ನೀಡಿದಾಗ ಒಂದು ವರ್ಷದ ೩೬೫ ದಿನಗಳಲ್ಲಿ ಡಾ.ರಾಜಶೇಖರ ಎಸ್. ೧೫೦, ಡಾ.ರಮೇಶ ರಾಠೋಡ ೭೭, ಡಾ.ಸಾಯಬಣ್ಣ ಗುಣಕಿ ೫೮, ಡಾ.ಶಂಕರರಾವ್ ದೇಶಮುಖ ೨೧೭, ಡಾ.ವಿಜಯಮಹಾಂತೇಶ ೬೬ ದಿನ ಗೈರು ಹಾಜರಾಗಿ ವರ್ಷದ ಸಂಪೂರ್ಣ ಸಂಬಳ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ದಾಖಲೆಗಳನ್ನು ಮಾಧ್ಯಮದವರ ಮುಂದೆ ತೋರಿಸಿದರು.
ಹೀಗೆ ನಮ್ಮ ಮೇಲೆ ಸುಖಾ ಸುಮ್ಮನೆ ಆರೋಪ ಮಾಡಿ ಪ್ರಕರಣ ದಾಖಲಿಸಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ಸೂಕ್ತ ತನಿಖೆ ಮಾಡಿ ಕಾನೂನು ಕೈಗೊಳ್ಳಬೇಕು ಎಂದು ಮೇಲಾಧಿಕಾರಿಗಳಿಗೆ ಶಿವಕುಮಾರ ಮನವಿ ಮಾಡಿಕೊಂಡರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.