Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೊನವಾಡದಲ್ಲಿ ಬಿಜೆಪಿ ವಿಜಯೋತ್ಸವ :ರೈತ ತಂಡಕ್ಕೆ ಸನ್ಮಾನ
(ರಾಜ್ಯ ) ಜಿಲ್ಲೆ

ಹೊನವಾಡದಲ್ಲಿ ಬಿಜೆಪಿ ವಿಜಯೋತ್ಸವ :ರೈತ ತಂಡಕ್ಕೆ ಸನ್ಮಾನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರೈತರ ಪಹಣಿಯಲ್ಲಿ ವಕ್ಫ್ ನಮೂದಾಗಿರುವ ವಿಷಯವನ್ನು ಮೊಟ್ಟಮೊದಲು ಹೊನವಾಡ ರೈತರು ಧ್ವನಿ ಎತ್ತಿ ಈ ಬಗ್ಗೆ ಆಂತಕ ನಿವಾರಣೆ ಮಾಡುವಂತೆ ಸಂಸದ ತೇಜಸ್ವಿ ಸೂರ್ಯ ಅವರನ್ನು ನಿಯೋಗದೊಂದಿಗೆ ಭೇಟಿ ಮಾಡಿದ ರೈತ ತಂಡವನ್ನು ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.
ವಕ್ಫ್ ಕಾಯ್ದೆ ರದ್ದುಗೊಳ್ಳಲು ಹೊನವಾಡ ರೈತರ ಈ ನಿಯೋಗವೇ ಮುನ್ನುಡಿ ಬರೆಯಿತು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಸಾವಯವ ಬೀಜ ನಿಗಮದ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ, ಡಾ.ಸುರೇಶ ಬಿರಾದಾರ ಮೊದಲಾದ ಮುಖಂಡರು ರೈತರಿಗೆ ಶಾಲು ಹೊದಿಸಿ, ಸಿಹಿ ತಿನಿಸಿ ಆತ್ಮೀಯವಾಗಿ ಸನ್ಮಾನಿಸಿದರು.
ಕೇಂದ್ರ ಗೃಹ ಸಚಿವ ಅಮೀತ ಷಹಾ ಅವರ ಭಾವಚಿತ್ರದ ಕಟೌಟ್ ಪ್ರದರ್ಶಿಸಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.
ನಿಯೋಗದಲ್ಲಿದ್ದ ರೈತರಾದ
ಶಿವಾಜಿ ಜಾಧವ, ಮಾಳಪ್ಪ ಗುಗ್ಗರಿ, ಗೋವಿಂದ ರಜಪೂತ, ಚೆನ್ನಪ್ಪ ಕೋಟಿ, ತುಕಾರಾಮ ನಲವಡೆ, ಲಕ್ಕಪ್ಪ ಕಾತ್ರಾಳ
ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ
ಕರ್ನಾಟಕ ಸಾವಯವ ಬೀಜ ಪ್ರಮಾಣನ ಸಂಸ್ಥೆ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ ಮಾತನಾಡಿ,
ವಕ್ಫ್ ಹೋರಾಟ ಆರಂಭವಾಗಿದ್ದೇ ಹೊನವಾಡದಿಂದ, ಹೊನವಾಡ ರೈತರು ಸಂಸದ ತೇಜಸ್ವಿ ಸೂರ್ಯ ಅವರನ್ನು ಭೇಟಿಯಾದ ಪರಿಣಾಮ ತೇಜಸ್ವಿ ಸೂರ್ಯ ಅವರು ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿದರು. ಪರಿಣಾಮವಾಗಿ ಕರಾಳ ವಕ್ಫ್ ಕಾಯ್ದೆ ರದ್ದಾಗಿದೆ, ಇದಕ್ಕೆ ಹೊನವಾಡ ಹೋರಾಟವೇ ಕಾರಣ ಎಂದರು.
ವಕ್ಫ್ ವಿರುದ್ದ ರೈತರಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಬಿಜೆಪಿ ಸಹ ಧ್ವನಿಗೂಡಿಸಿತ್ತು, ವಕ್ಫ್ ಪ್ರಹಸನದಿಂದಾಗಿ ಅನೇಕ ರೈತರು ಆತಂಕ ಪಡುವಂತಾಗಿತ್ತು, ಅನೇಕ ರೈತರು ಸಾಲಕ್ಕಾಗಿ ಅರ್ಜಿ ಹಾಕಲು ಹೋದಾಗ ಅಲ್ಲಿ ಪಹಣಿಯಲ್ಲಿ ವಕ್ಫ್ ನಮೂದಾಗಿದ್ದನ್ನು ನೋಡಿ ಕಣ್ಣೀರು ಸುರಿಸಿದ್ದರು, ಈಗ ಕೇಂದ್ರ ಸರ್ಕಾರ ರೈತರ ಆತಂಕ ದೂರ ಮಾಡಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ,
ಬಡವರ ಜಮೀನು, ಮಠ ಮಾನ್ಯಗಳ ಜಮೀನನ್ನು ವಕ್ಫ್ ಹೆಸರಿನಲ್ಲಿ ಕಸಿದುಕೊಳ್ಳುವ ಕೆಟ್ಟ ಕಾರ್ಯಕ್ಕೆ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ನಡೆದಿತ್ತು, ಈ ಬಗ್ಗೆ ಕಾಂಗ್ರೆಸ್ ಸರ್ಕಾರ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ತೋರಲಿಲ್ಲ ಎಂದರು. ಆದರೆ ಹೊನವಾಡ ರೈತರ ಅವಿರತ ಹೋರಾಟದಿಂದ ವಕ್ಫ್ ಕಾಯ್ದೆ ರದ್ದಾಗಿದೆ, ಈ ಕಾಯ್ದೆ ರದ್ದತಿಗೆ ಹೊನವಾಡ ರೈತರೇ ಮೂಲ‌ ಕಾರಣ ಎಂದರು. ಕೇಂದ್ರ ಸಚಿವ ಅಮೀತ್ ಷಹಾ ಸಹ ಹೊನವಾಡ ಗ್ರಾಮದ ರೈತರ ಹೋರಾಟವನ್ನು ಉಲ್ಲೇಖಿಸಿದ್ದು ಹೆಮ್ಮೆಯ ಸಂಗತಿ ಎಂದರು.
ಕಾಂಗ್ರೆಸ್ ನೀತಿಯಿಂದ ಆಗುತ್ತಿದ್ದ ರೈತರ ತೊಂದರೆಗೆ ಬಿಜೆಪಿ ಕೇಂದ್ರ ಸರ್ಕಾರ ಇತಿಶ್ರೀ ಹಾಡಿದೆ ಎಂದರು.
ಬಿಜೆಪಿ ಬಬಲೇಶ್ವರ ಮಂಡಳ ಅಧ್ಯಕ್ಷ ಸಂತೋಷ ಕುರದಡ್ಡಿ, ಮಾಧ್ಯಮ ಪ್ರಮುಖ ವಿಜಯ ಜೋಶಿ ಸೇರಿದಂತೆ ಹಲವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.