Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»“ವಲಸೆ ಹೋಗದಿರಿ, ನಿಮ್ಮೂರಲ್ಲೆ 100 ದಿನಗಳ ಕೆಲಸದ ಖಾತರಿಯಿದೆ”
(ರಾಜ್ಯ ) ಜಿಲ್ಲೆ

“ವಲಸೆ ಹೋಗದಿರಿ, ನಿಮ್ಮೂರಲ್ಲೆ 100 ದಿನಗಳ ಕೆಲಸದ ಖಾತರಿಯಿದೆ”

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೋಟ್ಯಾಳದಲ್ಲಿ ದುಡಿಯೋಣ ಬಾ ಅಭಿಯಾನ | ಸಹಾಯಕ ನಿರ್ದೇಶಕ ಬಸವರಾಜ ಸಂಕಗೊಂಡ ಸಲಹೆ

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ತಾಲೂಕಿನ ಕೋಟ್ಯಾಳ ಗ್ರಾಮ ಪಂಚಾಯತಿಯಲ್ಲಿ ಮನರೇಗಾ ಯೋಜನೆಯಡಿ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ 100 ದಿನಗಳ ಉದ್ಯೋಗ ಒದಗಿಸುವ ಸಲುವಾಗಿ ಮಾಹಿತಿ, ಶಿಕ್ಷಣ & ಸಂವಹನ ಕಾರ್ಯಕ್ರಮದಡಿ ಹಮ್ಮಿಕೊಂಡ “ದುಡಿಯೋಣ ಬಾ” ಅಭಿಯಾನಕ್ಕೆ ಚಾಲನೆ ನೀಡಿ ತಿಕೋಟಾ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕರಾದ ಬಸವರಾಜ ಸಂಕಗೊಂಡ ಮಾತನಾಡಿದರು.
“ಈ ಬೇಸಿಗೆ ಅವಧಿಯಲ್ಲಿ ನರೇಗಾ ಕೂಲಿಕಾರರಿಗೆ ನಿರಂತರವಾಗಿ 100 ದಿನಗಳ ಉದ್ಯೋಗ ಒದಗಿಸುವುದು ಆ ಮೂಲಕ ಗ್ರಾಮೀಣ ಆಸ್ತಿಗಳ ರಚನೆ ಮಾಡುವುದು, ಜಲ ಸಂರಕ್ಷಣೆ ಮಾಡಿ ಅಂತರ್ಜಲ ಮಟ್ಟ ವೃದ್ಧಿಸುವುದು, ಅರಣ್ಯೀಕರಣ ಕಾಮಗಾರಿಗಳು, ಶಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಯಶಸ್ವಿಯಾಗಿ ನಿರ್ಮಾಣ ಮಾಡುವುದು ಈ ದುಡಿಯೋಣ ಬಾ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಈ ಅಭಿಯಾನದ ಅಂಗವಾಗಿ ಎಲ್ಲ ಗ್ರಾಮ ಪಂಚಾಯತಿಯಲ್ಲಿ ಮನೆ-ಮನೆ ಭೇಟಿ, ಸ್ವ-ಸಹಾಯ ಸಂಘದ ಸಭೆ, ಮಹಿಳಾ ವಿಶೇಷ ಗ್ರಾಮ ಸಭೆ, ವಾರ್ಡ್ ಸಭೆ, ಡಂಗೂರ, ಕರಪತ್ರ ವಿತರಣೆಯಂತಹ ವಿವಿಧ ಐಇಸಿ ಚಟುವಟಿಕೆಗಳ ಮೂಲಕ ಅರಿವು ಮೂಡಿಸುವ ಕಾರ್ಯವನ್ನು ತಾಲೂಕು ಐಇಸಿ ಬಳಗ ಮಾಡುತ್ತಿದೆ. ಐಇಸಿ ತಂಡದ ಜೊತೆ ಸ್ವತಃ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಎಲ್ಲ ಪಿಡಿಓಗಳು, ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು, ಟಿಸಿ, ಟಿಎಇ, ಬಿ.ಎಪ್.ಟಿ, ಕಾಯಕ ಮಿತ್ರ ಸೇರಿದಂತೆ ಚುನಾಯಿತ ಸದಸ್ಯರುಗಳು, ನರೇಗಾ ಸಿಬ್ಬಂದಿಗಳು, ಸ್ವ-ಸಹಾಯ ಸಂಘದವರು ಈ ಅಭಿಯಾನದಲ್ಲಿ ಅತ್ಯಂತ ಉತ್ಸುಕತೆಯಿಂದ ಪಾಲ್ಗೊಳುತ್ತಿದ್ದಾರೆ ಎಂದರು.
ತಾಲೂಕು ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ ಮಾತನಾಡಿ, “ನಮ್ಮ ಮನರೇಗಾ ಯೋಜನೆಯಡಿ ವಿಶೇಷವಾಗಿ ಮಹಿಳೆಯರಿಗೆ, ವಿಶೇಷ ಚೇತನರಿಗೆ, ಹಿರಿಯ ನಾಗರಿಕರಿಗೆ, ಲಿಂಗತ್ವ ಅಲ್ಪಸಂಖ್ಯಾತರಿಗೆ, ದುರ್ಬಲ ವರ್ಗದವರಿಗೆ ವಿಶೇಷ ಆಧ್ಯತೆ ನೀಡಲಾಗುತ್ತಿದೆ. ಕಡ್ಡಾಯವಾಗಿ 60% ಮಹಿಳೆಯರ ಭಾಗವಹಿಸುವಿಕೆಯನ್ನು ನಿರ್ವಹಣೆ ಮಾಡಲು ಈಗಾಗಲೇ ಎಲ್ಲ ಗ್ರಾಮ ಪಂಚಾಯತಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ನೋಂದಾಯಿತ ವಿಶೇಷಚೇತನರಿಗೆ 100 ದಿನಗಳ ಕೆಲಸ ಖಾತರಿಪಡಿಸಿಕೊಳ್ಳಲು ಸಹ ಸೂಚಿಸಲಾಗಿದೆ. ಸಣ್ಣ-ಅತೀ ಸಣ್ಣ ರೈತ್ತರಿಗೆ ಅವಶ್ಯಕವಿರುವ ವೈಯಕ್ತಿಕ ಕಾಮಗಾರಿಗಳನ್ನು ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿ ವರ್ಷ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರು ತಮ್ಮ ಊರಲ್ಲಿ ಕೆಲಸ ಸಿಗದ ಕಾರಣದಿಂದ ನಗರ ಪ್ರದೇಶಗಳಿಗೆ ವಲಸೆ ಹೋಗುವುದು ಸಾಮಾನ್ಯ. ಇದನ್ನು ಗಂಭೀರವಾಗಿ ಪರಿಗಣಿಸಿದ ನಮ್ಮ ತಾಲೂಕು ಪಂಚಾಯತಿ ತಂಡ ನರೇಗಾ ಯೋಜನೆಯ ಕುರಿತು, ಯೋಜನೆಯಡಿ ಸಿಗುವ ಸೌಲಭ್ಯಗಳ ಕುರಿತು ಹೆಚ್ಚು ಪ್ರಚಾರ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಕೂಲಿಕಾರರಿಗೆ ನರೇಗಾದಿಂದಾಗುವ ಅನುಕೂಲಗಳ ಕುರಿತು ಸುವಿವರವಾದ ಮಾಹಿತಿ ನೀಡುವ ಕಾರ್ಯ ಭರದಿಂದ ಸಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿ.ಎಫ್.ಟಿ ಸಿದ್ರಾಯ ದಾಶ್ಯಾಳ, ಡಿಇಒ ಆರತಿ ಪಾಟೀಲ, ಕ್ಲರ್ಕ್ ಶರಣಪ್ಪ ಜಿಡ್ಡಿ, ಎಂ.ಬಿ.ಕೆ ಮೇಘಾ ಪಶ್ಚಾಪುರ ಸೇರಿದಂತೆ ಕಾಯಕ ಬಂಧುಗಳು & ಕೂಲಿಕಾರರು ಸೇರಿ ಇತರರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.