Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಸೆಸ್ ಪ್ರತಿಭಟನಾ ರ‍್ಯಾಲಿ
(ರಾಜ್ಯ ) ಜಿಲ್ಲೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಸೆಸ್ ಪ್ರತಿಭಟನಾ ರ‍್ಯಾಲಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕಲಕೇರಿ: ತಾಲೂಕಾ ಆಡಳಿತದ ವ್ಯವಸ್ಥೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮತಿ (ಪ್ರೋ.ಬಿ.ಕೃಫ್ಣಪ್ಪ ಬಣ) ವಲಯ ಶಾಖೆ ಕಲಕೇರಿ ಹಾಗೂ ವಿವಿಧ ಸಂಘಟನೆಗಳ ಪ್ರಗತಿಪರ ಹೋರಾಟಗಾರರು, ರೈತಪರ ಹೋರಾಟಗಾರರ ನೇತೃತ್ವದಲ್ಲಿ ತಾಳಿಕೋಟಿ ತಾಲೂಕಿನ ಕಲಕೇರಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ನಾಗರಿಕರ ಅನಕೂಲಕ್ಕಾಗಿ ವಿವಿಧ ಬೇಡಿಕೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರತಿಭಟನಾ ರ‍್ಯಾಲಿ ಮಾಡಲಾಯಿತು.
ಕಲಕೇರಿ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಪೊಲೀಸ್ ಠಾಣೆಯ ಮಾರ್ಗವಾಗಿ ಬಸ್ ನಿಲ್ದಾಣದಲ್ಲಿ ಸಭೆ ಸೇರಿದ ಪ್ರತಿಭಟನಾಕಾರರು ಸದರಿ ನ್ಯಾಯಯುತವಾದ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡು ಉಪ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮದ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಿಗೆ ಸಮಸ್ಯೆಗಳು ಹೆಚ್ಚಾದವು ಹೊರತಾಗಿ ಕಡಿಮೆ ಆಗಲಿಲ್ಲ. ಈಗ ಆಡಳಿತ ನಡೆಸುತ್ತಿರುವ ತಾಲೂಕ ಆಡಳಿತ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಕಡೆ ಗಮನಹರಿಸಿ ಸದರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಮ್ಮ ಬೇಡಿಕೆಗಳನ್ನು ೧೦ ದಿನಗಳ ಒಳಗಾಗಿ ನೇರವೇರಿಸಿಕೊಡಬೇಕು. ಒಂದು ವೇಳೆ ಬೇಡಿಕೆ ಈಡೇರದಿದ್ದ ಪಕ್ಷದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರಿಗೆ ಉಗ್ರರೂಪದ ಪ್ರತಿಭಟನಾ ರ‍್ಯಾಲಿ ಮಾಡುವುದಾಗಿ ಎಚ್ಚರಿಸಿದರು.
ಈ ವೇಳೆ ಮನವಿ ಸ್ವೀಕರಿಸಿ ಮಾತನಾಡಿದ ತಾಳಿಕೋಟಿ ಉಪ ತಹಶೀಲ್ದಾರ ಜೆ.ಆರ್.ಜೈನಾಪುರ ಅವರು, ನಿಮ್ಮ ಬೇಡಿಕೆಗಳನ್ನು ಮಾನ್ಯ ಜಿಲ್ಲಾಡಳಿತಕ್ಕೆ ತಲುಪಿಸುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರೇಣುಕಾ ಪಾಟೀಲ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಲಕ್ಕಪ್ಪ ಬಡಿಗೇರ, ಶರಣು ಸಿಂಧೆ, ಹಣಮಂತ ವಡ್ಡರ, ಲಕ್ಷ್ಮಣ್ ಹೊಸಮನಿ, ಅನೀಲ ಬಡಿಗೇರ, ಅಶೋಕ್ ಗುಡಿಸಲಮನಿ, ಶ್ರೀಶೈಲ ಜಾಲವಾದ , ಅಕ್ಬರ್ ಬನ್ನೆಟ್ಟಿ, ಮಹಾದೇವ ಲಿಂಗದಳ್ಳಿ, ಸೋಮು ನೀರಲಗಿ, ದಾನೇಶ ಕೇಸರಿ, ಮಾಂತು ಸಂದಿಮನಿ, ಶಿವು ಹೊಸಮನಿ, ಉಮೇಶ್ ಬಡಿಗೇರ, ಚಂದ್ರು ಬಡಿಗೇರ, ಕಾಸೀಮ್ ನಾಯ್ಕೊಡಿ, ಸಾಯಬಣ್ಣ ನೀರಲಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಪದಾಧಿಕಾರಿಗಳು ಹಾಗೂ ರೈತ ಸಂಘದ ಮುಖಂಡರು ಉಪಸ್ಥಿತರಿದ್ದರು.

ಪ್ರತಿಭಟನಾಕಾರರ ಬೇಡಿಕೆಗಳು

೧. ತಾಳಿಕೋಟಿ ತಾಲೂಕಿನ ಕಲಕೇರಿ ಹಾಗೂ ಸುತ್ತಮುತ್ತಲಿನ ಗ್ರಾಮದ ರೈತರಿಗೆ ಬೆಳೆ ಪರಿಹಾರ ಮತ್ತು ಬೆಳೆ ವಿಮೆ ಮಂಜೂರಾತಿ ಮಾಡಬೇಕು.
೨. ಬೂದಿಹಾಳ-ಪೀರಾಪೂರ ಏತ ನೀರಾವರಿ ಯೋಜನೆಡಿಯಲ್ಲಿ ರೈತರ ಜಮೀನುಗಳ ಅನಕೂಲಕ್ಕಾಗಿ ೨೪೦ ಹೊಸದಾಗಿ ನೀರಿನ ಶೇಖರಣಾ ಘಟಕಗಳು(ಟ್ರಯಲ್ ರನ್ ಪಾಕಗಳು) ಮಂಜೂರಾಗಿದ್ದು ಕೂಡಲೇ ಕೆಲಸ ಪ್ರಾರಂಭಿಸಬೇಕು.
೩. ಕಲಕೇರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳ ಅನಕೂಲಕ್ಕಾಗಿ ೧೦೮ ಅಂಬುಲೆನ್ಸ್ ಸೇವೆಯನ್ನು ಕೂಡಲೇ ಪ್ರಾರಂಭಿಸಬೇಕು ಹಾಗೂ ರೋಗಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಸಬೇಕು.
೪. ಕಲಕೇರಿ ಗ್ರಾಮ ಪಂಚಾಯತಿಗೆ ವಿವಿಧ ವಸತಿ ಯೋಜನೆಡಿಯಲ್ಲಿ ೪೫೦ ಮನೆಗಳ ಮಂಜೂರಾಗಿದ್ದು ಕೂಡಲೇ ಫಲಾನುಭವಿಗಳ ಆಯ್ಕೆ ಪಟ್ಟಿ ತಯಾರಿಸಿ ಮಂಜೂರು ಮಾಡಬೇಕು.
೫. ಹುಣಶ್ಯಾಳ ಕೆರೆ ನೀರು ತುಂಬುವ ಯೋಜನೆಡಿಯಲ್ಲಿ ಅಂದಾಜು ೫.೫ ಕೋಟಿ ಮಂಜೂರಾಗಿದ್ದು, ಕೆರೆ ತುಂಬುವ ಕೆಲಸ ಪೂರ್ಣಗೊಳಿಸಬೇಕು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.