Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಸಾರ್ವಜನಿಕರ ಸಹಭಾಗಿತ್ವ ಮುಖ್ಯ
(ರಾಜ್ಯ ) ಜಿಲ್ಲೆ

ಸರ್ಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಸಾರ್ವಜನಿಕರ ಸಹಭಾಗಿತ್ವ ಮುಖ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಮಾಜ ಕಾರ್ಯ ಶಿಬಿರ ಉದ್ಘಾಟಿಸಿದ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಇಂತಹ ಶಿಬಿರಗಳು ಅತ್ಯಗತ್ಯವಾಗಿವೆ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ವಿಭಾಗ ಹಾಗೂ ಬಾಬಾನಗರ ಗ್ರಾಮ ಪಂಚಾಯತ ಇವರ ಸಹಯೋಗದಲ್ಲಿ ತಿಕೋಟಾ ತಾಲೂಕಿನ ಬಾಬಾನಗರ ಗ್ರಾಮದಲ್ಲಿ ಹಮ್ಮಿಕೊಂಡಿರುವ ಸಮಾಜ ಕಾರ್ಯ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ವಿವಿಧ ಸಮುದಾಯಗಳ ಪ್ರಗತಿಗೆ ಸಾಕಷ್ಟು ಪ್ರಾಯೋಗಿಕ ಕಾರ್ಯಗಳು, ಜಾಗೃತಿ ಜಾಥಾಗಳು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕಾಗಿವೆ. ಸರ್ಕಾರದಿಂದ ರೂಪಗೊಳ್ಳುವ ಯೋಜನೆಗಳು ಯಶಸ್ವಿಯಾಗಬೇಕಾದರೆ ಸಾರ್ವಜನಿಕರ ಸಹಭಾಗಿತ್ವ ಅತ್ಯಂತ ಮುಖ್ಯ. ಇಂತಹ ಶಿಬಿರಗಳು ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನಶೈಲಿ, ಸಂಸ್ಕೃತಿ ಮತ್ತು ಪರಂಪರೆಯ ಪರಿಚಯವನ್ನು ನೀಡುತ್ತವೆ ಎಂದರು.
ಇದೇ ಸಂದರ್ಭದಲ್ಲಿ ಗ್ರಾಮದ ಹಿರಿಯ ಶಿಕ್ಷಕ ಬಸವರಾಜ ನಾವಿ ಮಾತನಾಡಿ, ಶಿಬಿರದ ಪ್ರಾಮುಖ್ಯತೆಯನ್ನು ಗ್ರಾಮಸ್ಥರಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಸದಸ್ಯ ಸಿದಗೊಂಡ ರುದ್ರಗೌಡರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಅಧ್ಯಕ್ಷೆ ಸಾಹೇರಾಭಾನು ಕ ಏಳಾಪುರ ಮಾತನಾಡಿ, ಶಿಬಿರಾರ್ಥಿಗಳು ಗ್ರಾಮೀಣ ಜನರೊಂದಿಗೆ ನಿಕಟ ಸಂಪರ್ಕ ಹೊಂದಿ, ಅವರ ಸಂಸ್ಕೃತಿ, ಜೀವನಶೈಲಿ ಹಾಗೂ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವ ಮೂಲಕ ಕಲಿಯಬೇಕು. ಜೊತೆಗೆ ಶಿಬಿರದಲ್ಲಿ ತಮ್ಮ ಪಾಲಿಗೆ ಬಂದ ಜವಾಬ್ದಾರಿಗಳನ್ನು ನಿಷ್ಠೆಯಿಂದ ಹಾಗೂ ಶಿಸ್ತಿನಿಂದ ನಿರ್ವಹಿಸಬೇಕೆಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಉಪಾಧ್ಯಕ್ಷ ಅಯ್ಯಗೌಡ ರುದ್ರಗೌಡರ, ಸದಸ್ಯರಾದ ಅಶೋಕ ನಿಂಗನಗೌಡ ಬಿರಾದಾರ, ಪ್ರಕಾಶ ಸಿದ್ರಾಮ ಆಯತವಾಡ, ಮಹಮದಲೀಫ ಅಮೀನಸಾಬ ಮಕಾಂದಾರ, ಶ್ರೀಕಾಂತ ಭಜಂತ್ರಿ, ರಾಜಕುಮಾರ ರಾಮಣ್ಣ ವಾಲಿಕಾರ, ಸಮಾಜ ಕಾರ್ಯ ವಿಭಾಗ ಸಹಪ್ರಾಧ್ಯಾಪಕ ಡಾ.ರಮೇಶ ಎಂ. ಸೋನಾಕಾಂಬಳೆ, ಶಿಬಿರದ ಸಹಾಯಕರಾದ ಶ್ರೀನಾಥ ಪಾಟೀಲ, ಮಂಜುಳಾ ಮುದಿಗೌಡರ, ಊರಿನ ಗ್ರಾಮಸ್ಥರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಮಾಜ ಕಾರ್ಯ ಶಿಬಿರದ ನಿರ್ದೇಶಕಿ ಡಾ.ಕಲಾವತಿ ಕಾಂಬಳೆ ಪ್ರಾಸ್ಥಾವಿಕ ನುಡಿಗಳನ್ನಾಡಿದರು. ಲಕ್ಷ್ಮಿ ಬಜಂತ್ರಿ ಪ್ರಾರ್ಥಿಸಿದರು. ಸುಧಾರಾಣಿ ಮೇಟಿ ಸ್ವಾಗತಿಸಿದರು. ವಿದ್ಯಾಶ್ರೀ ಬೆಳುಂಡಗಿ ನಿರೂಪಿಸಿದರು. ಸುರೇಖಾ ರಾಠೋಡ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.