ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಏಪ್ರಿಲ್ ೧೦ರಂದು ರಾಜ್ಯಾದ್ಯಂತ ಮಹಾವೀರ ಜಯಂತಿ ಆಚರಣೆ ಹಿನ್ನಲೆ ಈ ದಿನದಂದು ವಿಜಯಪುರ ಜಿಲ್ಲೆಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಿ, ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ ಎಂದು ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.