Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ಯತ್ನಾಳ ಉಚ್ಚಾಟನೆ ವಿರೋಧಿಸಿ ಬೃಹತ್ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಶಾಸಕ ಯತ್ನಾಳ ಉಚ್ಚಾಟನೆ ವಿರೋಧಿಸಿ ಬೃಹತ್ ಪ್ರತಿಭಟನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟಿಸಿದನ್ನು ವಿರೋಧಿಸಿ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಪಟ್ಟಣದ ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ಹಲಗೆ ಬಾರಿಸುತ್ತ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಯಡಿಯೂರಪ್ಪನವರ ವಿರುಧ್ಧ ಧಿಕ್ಕಾರ ಕೂಗುತ್ತ, ಯತ್ನಾಳ ಅವರಿಗೆ ಜಯವಾಗಲಿ ಎಂಬ ಜಯಘೋಷ ಹಾಕುತ್ತ ಸಾಗಿದರು.
ಬಸನಗೌಡ ಪಾಟೀಲ (ನಾಗರಾಳ ಹುಲಿ) ಮಾತನಾಡಿ, ಯಡಿಯೂರಪ್ಪ ವಿಜಯೇಂದ್ರ ಅವರ ಕುತಂತ್ರ ಕುಮ್ಮಕ್ಕಿನಿಂದ ಯತ್ನಾಳ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿರುವದು ಹಿಂದೂ ಸಮುದಾಯಕ್ಕೆ ಮಾಡಿರುವ ಅಪಮಾನ. ಈ ತಪ್ಪು ನಿರ್ಧಾರದಿಂದ ಬಿಜೆಪಿ ಪಕ್ಷಕ್ಕೆ ಬಹುದೊಡ್ಡ ಹೊಡೆತ ಬೀಳಲಿದೆ. ಕೂಡಲೇ ಅವರನ್ನು ಪಕ್ಷಕ್ಕೆ ಮರಳಿ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ಎಂ.ಎಸ್.ರುದ್ರಗೌಡ ಮಾತನಾಡಿ, ಹೈಕಮಾಂಡ ತನ್ನ ನಿರ್ಧಾರವನ್ನು ಬದಲಿಸಿ ಮತ್ತೆ ಯತ್ನಾಳ ಅವರನ್ನು ಪಕ್ಷಕ್ಕೆ ಗೌರವಯುತವಾಗಿ ಸ್ವಾಗತಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ. ಬಿಜೆಪಿ ಕೇವಲ ಅಪ್ಪ ಮಕ್ಕಳ ಪಕ್ಷವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರು ಹೊಂದಾಣಿಕೆ ಮಾಡಿಕೊಂಡು ರಾಜಕೀಯ ಮಾಡುತ್ತಾರೆ. ಆದರೆ ಬಸವನಗೌಡರಿಗೆ ಅದು ಸರಿಹೋಗುವುದಿಲ್ಲ. ಪಕ್ಷದ ರಾಷ್ಟ್ರೀಯ ಮುಖಂಡರು ಅವರ ಉಛ್ಛಾಟನೆಯನ್ನು ರದ್ದುಗೊಳಿಸಿ ಬಸನಗೌಡರಿಗೆ ಮರಳಿ ಪಕ್ಷಕ್ಕೆ ಕರೆತರಬೇಕೆಂದು ಆಗ್ರಹಿಸಿದರು.
ದಯಾಸಾಗರ ಪಾಟೀಲ ಮಾತನಾಡಿ, ಹಿಂದೂಪರವಾಗಿ ಗಟ್ಟಿಯಾಗಿ ನಿಲ್ಲುವ ಯತ್ನಾಳ ಸಾಹೇಬರನ್ನು ಬಿಜೆಪಿ ಪಕ್ಷ ಉಚ್ಛಾಟಿಸಿದ್ದು ಸರಿಯಲ್ಲ. ಹಿಂದೂನಾಯಕರಾದ ಬಸವನಗೌಡ ಪಾಟೀಲ ಯತ್ನಾಳ ಅವರನ್ನು ಅಪ್ಪ-ಮಕ್ಕಳು ಕೂಡಿಕೊಂಡು ಅವರನ್ನು ಉಚ್ಚಾಟನೆ ಮಾಡಿರಬಹುದು ಆದರೆ ರಾಜ್ಯದ ಜನ ಕೈಬಿಡುವುದಿಲ್ಲ. ಯತ್ನಾಳ ಗೌಡರು ಹಿಂದುತ್ವಕ್ಕಾಗಿ ಹೋರಾಟ ಮಾಡುತ್ತಾರೆ. ನೇರವಾಗಿ ಇದ್ದದ್ದನ್ನು ಇದ್ದಂಗೆ ಹೇಳುವ ವ್ಯಕ್ತಿಯಾಗಿದ್ದಾರೆ. ಅವರನ್ನು ಉಚ್ಚಾಟಿಸಿದ್ದು ಸರಿಯಲ್ಲ. ಇದರಿಂದ ಪಕ್ಷಕ್ಕೆ ಭಾರೀ ಹಿನ್ನಡೆಯಾಗುವುದರಲ್ಲಿ ಸಂದೇಹವಿಲ್ಲ. ಮಾಡಿದ ತಪ್ಪನ್ನು ಹೈಕಮಾಂಡ್ ಒಪ್ಪಿಕೊಂಡು ಯತ್ನಾಳರನ್ನು ಕೂಡಲೆ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳಬೇಕೆಂದರು.
ಇಂಡಿ ತಾಲೂಕಾ ಪಂಚಮಸಾಲಿ ಸಮಾಜದ ಅಧ್ಯಕ್ಷ ವಿ.ಎಚ್.ಬಿರಾದಾರ ಮಾತನಾಡಿದರು.
ಬಸನಗೌಡ ಪಾಟೀಲ ಯತ್ನಾಳ ಅವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ, ವಿಜಯೇಂದ್ರ ಹಾಗೂ ಯಡಿಯೂರಪ್ಪನವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.
ಪ್ರತಿಭಟನೆಯಲ್ಲಿ ಶ್ರೀಶೈಲ ಮುಳಜಿ, ಶರಣಗೌಡ ಬಂಡಿ, ಗಿರಿಮಲ್ಲಗೌಡ ಬಿರಾದಾರ, ರಮೇಶ ಬಿರಾದಾರ, ಅಣ್ಣಪ್ಪ ಬಡಿಗೇರ, ಸೋಮಶೇಖರ ದೇವರ, ಸೋಮನಾಥ ಪ್ರಚಂಡಿ, ಶ್ರೀಶೈಲ ಕಲ್ಲೂರ, ವಿಠ್ಠಲ ಬಾಬಳಗಾಂವ, ಅಶೋಕಗೌಡ ಪಾಟೀಲ, ಪಂಚಪ್ಪ ಪಾಟೀಲ, ವಿನೋದ ಹದಗಲ್ಲ, ಆನಂದ ದೇವರ, ಶಾಂತೇಶ ಕ್ಷತ್ರಿ, ರತನ ಹಲವಾಯಿ ಅಕ್ಷಯ ಪಾಟೀಲ ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.