ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪಪೂ ಕಾಲೇಜಿನ ವಿದ್ಯಾರ್ಥಿಗಳು ಮಾರ್ಚ-೨೦೨೫ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಕಲಾ ವಿಭಾಗ
ನಾಗೇಂದ್ರ ಮಾದರ (೫೬೩) ಶೇ.೯೩.೮೩ ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ, ಪರಶುರಾಮ ನಡುವಿನಮನಿ (೫೩೧) ಶೇ.೮೮.೫ ಅಂಕ ಪಡೆದು ದ್ವಿತೀಯ ಸ್ಥಾನ, ಶ್ರೀಧರ ಬನಸೋಡೆ (೫೨೨) ಶೇ.೮೭ ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.
ವಾಣಿಜ್ಯ ವಿಭಾಗ
ಮೌನೇಶ ನಾಯ್ಕೋಡಿ (೫೫೮) ಶೇ.೯೩ ಅಂಕ ಪಡೆದು ಪ್ರಥಮ ಸ್ಥಾನ, ಚಂದ್ರು ಬಾಗೇವಾಡಿ (೫೩೫) ಶೇ.೮೯.೧೬ ಅಂಕ ಪಡೆದು ದ್ವಿತೀಯ ಸ್ಥಾನ ಮತ್ತು ಭಾಗ್ಯಶ್ರೀ ಪತ್ತಾರ (೫೩೧) ಶೇ.೮೮.೫ ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಹಾಗೂ ವಿಜ್ಞಾನ ವಿಭಾಗದಲ್ಲಿ ಎಮ್.ಡಿ.ತಾಹಾ ಚೌಧರಿ (೪೩೫) ಶೇ.೭೨.೫ ಅಂಕ ಪಡೆದುಕೊಂಡಿರುತ್ತಾರೆ.
ಒಟ್ಟು ೬ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಮತ್ತು ೨೪ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿರುತ್ತಾರೆ. ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಅಶೋಕ ಮನಗೂಳಿ, ನಿರ್ದೇಶಕ ಮಂಡಳಿ ಸದಸ್ಯರು, ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.