ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಿಂದಗಿ ಪಟ್ಟಣದ ಕಲಕೇರಿ ಬೈಪಾಸ್ ಹತ್ತಿರವಿರುವ ಎಲೈಟ್ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ.
ವಿಜ್ಞಾನ ವಿಭಾಗ: ಸ್ವಾತಿ ಬಸವರಾಜ ಕಲಶೆಟ್ಟಿ, ೬೦೦ ಅಂಕಗಳಿಗೆ ೫೭೧ (ಶೇ.೯೫.೧೬) ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಚಾಂದಮಾ ಬಂದೇನವಾಜ್ ಯಡ್ರಾಮಿ ೫೬೪ (ಶೇ.೯೪.%) ಅಂಕ ಪಡೆದು ದ್ವಿತೀಯ ಸ್ಥಾನ, ಸುನಿಲ ನಾಯಕ ಹಾಗೂ ಅಶ್ವಿನಿ ಹಿಪ್ಪರಗಿ ವಿದ್ಯಾರ್ಥಿಗಳು ೫೬೦ (೯೩.೩೩%) ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿನಿಗಳ ಈ ಸಾಧನೆಗೆ ಸಂಸ್ಥೆಯ ವ್ಯವಸ್ಥಾಪಕ ಅಧ್ಯಕ್ಷ ಮಹಿಬೂಬ ಅಸಂತಾಪುರ, ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.