ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ಇಂಡಿಗೆ ಭೇಟಿ ನೀಡಿ, ಮೇಘಾ ಮಾರುಕಟ್ಟೆ, ಕೃಷಿ ವಿಜ್ಞಾನ ಕೇಂದ್ರ, ತಾಲೂಕಾ ಆಸ್ಪತ್ರೆ, ಮಿನಿ ವಿಧಾನಸೌಧಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಇಂಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೆಘಾ ಮಾರುಕಟ್ಟೆ ಕಾಮಗಾರಿಯನ್ನು ಪರಿಶೀಲನೆ ನಡೆಸಿ, ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಸಂಬಂಧಿಸಿದವರಿಗೆ ಅವರು ಸೂಚನೆ ನೀಡಿದರು.
ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಲಿಂಬೆ ಅಭಿವೃದ್ದಿ ಮಂಡಳಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು. ಮಹಾವೀಕ ವೃತ್ತಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರಸ್ತೆ ಕಾಮಗಾರಿಗಳ ಕುರಿತು ಅಗತ್ಯ ಸೂಚನೆ ನೀಡಿದರು. ನಂತರ ವಾರ್ಡ ನಂ.೧೦ರಲ್ಲಿ ಗ್ರಂಥಾಲಯ ನಿರ್ಮಾಣಕ್ಕಾಗಿ ಹಳೆಯ ಗ್ರಂಥಾಲಯ ಜಾಗವನ್ನು ಪರಿಶೀಲನೆ ನಡೆಸಿ, ಮಿನಿ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.