ಉದಯರಶ್ಮಿ ದಿನಪತ್ರಿಕೆ
ಚಡಚಣ: ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ರೇವತಗಾಂವ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯರಾದ ಹೀನಾ ಎಸ್ ಸೈಯದರವರು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಯಾಗಿದ್ದಾರೆ.
ವಿಜಯಪುರ ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ೧೦೦ ಮೀಟರ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಹೀನಾ ಸೈಯದರವರು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಶಿಕ್ಷಕಿಯ ಈ ಸಾಧನೆಗೆ ಶಾಲಾ ಮುಖ್ಯ ಗುರುಗಳಾದ ಆರ್.ಎನ್.ಹತ್ತಳ್ಳಿ, ಎಸ್‌ಡಿಎಂಸಿ ಅಧ್ಯಕ್ಷರಾದ ಅಶೋಕ ಬಿಜ್ಜರಗಿ, ಸದಸ್ಯರುಗಳು, ಸಹ ಶಿಕ್ಷಕ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.