ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭಗವಾನ್ ಮಹಾವೀರರು ಸತ್ಯ, ಅಹಿಂಸೆ, ಶಾಂತಿ ಹಾಗೂ ಸೌಹಾರ್ದತೆಯ ಮಹತ್ವವನ್ನು ಜಗತ್ತಿಗೆ ಸಾರಿದ್ದು, ಅವರ ಬೋಧನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ.
ಗುರುವಾರ ಡೀಮ್ಡ್ ವಿವಿಯಲ್ಲಿ ನಡೆದ ಭಗವಾನ್ ಮಹಾವೀರರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಹಾವೀರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಮಹಾವೀರರ ತತ್ವಾದರ್ಶಗಳು ಸಮಾಜಕ್ಕೆ ಮಾದರಿಯಾಗಿವೆ. ಎಲ್ಲರೂ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಡೀಮ್ಡ್ ವಿವಿ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ವೈದ್ಯಕೀಯ ವಿಭಾಗದ ಡೀನ ಡಾ. ತೇಜಸ್ವಿನಿ ವಲ್ಲಭ, ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ, ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ರಘುವೀರ ಕುಲಕರ್ಣಿ, ಚೀಫ್ ವಾರ್ಡನ್, ಡಾ. ಉದಯಕುಮಾರ ನುಚ್ಚಿ, ಪೆಥಾಲಾಜಿ ವಿಭಾಗದ ಮುಖ್ಯಸ್ಥ ಡಾ. ಸುರೇಖಾ ಹಿಪ್ಪರಗಿ, ಸಹಾಯಕ ರಜಿಸ್ಚ್ರಾರ್ ಡಾ. ಶ್ರೀಧರ ಬಗಲಿ, ಬೋಧಕ ಹಾಗೂ ಬೊಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.