ಉದಯರಶ್ಮಿ ದಿನಪತ್ರಿಕೆ
ಇಂಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಸವರಾಜ ನಿಂಗಣ್ಣ ಮಸಳಿ ಹಾಗೂ ಉಪಾಧ್ಯಕ್ಷರಾಗಿ ಜ್ಯೋತಿ ಎಚ್ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಾಲ್ಲೂಕಿನ ಖೇಡಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
ನೂತನ ಅಧ್ಯಕ್ಷ ಬಸವರಾಜ ಮಸಳಿ ಮಾತನಾಡಿ, ಸಂಘಕ್ಕೆ ಬರುವ ಎಲ್ಲ ರೀತಿಯ ಸೌಲಭ್ಯಗಳನ್ನು ನೇರವಾಗಿ ರೈತರು ಮತ್ತು ಷೇರುದಾರರಿಗೆ ತಲುಪಿಸುವ ಕಾರ್ಯವನ್ನು ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ನೂತನ ಸದಸ್ಯರಾದ ನೂರಮ್ಮದ ನಾಗೂರ, ಬಸಣ್ಣ ಕಲಶೇಟ್ಟಿ, ರಮೇಶ್ ವಾಲಿಕಾರ, ನಿಸಾರ ಅಹ್ಮದ ನಾಗೂರ, ಯಲ್ಲಾಲಿಂಗ ಮಸಳಿ, ಗೌರಾಬಾಯಿ ವಾಲಿಕಾರ ಅವರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿ ಗೌರವಿಸಿದರು.

