ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಇಲ್ಲಿಯ ಕೃಷಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾಗಿದ್ದ ಮತ್ತು ಈಗ ಶಿರಸಿಯ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಭಾಗದ ವಿಜ್ಞಾನಿ ಹಾಗೂ ಸಹಾಯಕ ಪ್ರಾಧ್ಯಾಪಕರಾಗಿರುವ ಹರೀಶ್.ಡಿ.ಕೆ. ಅವರು “ನ್ಯಾನೋ ಗೊಬ್ಬರಗಳಿಗೆ ವಿಶೇಷ ಒತ್ತು ನೀಡುವ ಮೂಲಕ ಈರುಳ್ಳಿಯಲ್ಲಿ ಸಮಗ್ರ ಬೆಳೆ ನಿರ್ವಹಣೆ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಧಾರವಾಡದ ಕೃಷಿ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿದೆ.
ಧಾರವಾಡ ಕೃಷಿ ವಿಶ್ವವಿದ್ಯಾಲಯದ ತೋಟಗಾರಿಕೆ ವಿಭಾಗದ ಪ್ರಾಧ್ಯಾಪಕರಾಗಿರುವ ಡಾ.ಎಸ್.ಜಿ.ಅಂಗಡಿ ಅವರ ಮಾರ್ಗದರ್ಶನದಲ್ಲಿ ಹರೀಶ್ ಡಿ.ಕೆ. ಅವರು ಸಂಶೋಧನೆ ಕೈಕೊಂಡು ಮಹಾಪ್ರಬಂಧ ಸಿದ್ದಪಡಿಸಿದ್ದರು. ಈ ಮಹಾಪ್ರಬಂಧವನ್ನು ಮೌಲ್ಯಮಾಪನ ಮಾಡಿದ ತಜ್ಞರು ನೀಡಿದ ಸಕಾರಾತ್ಮಕ ವರದಿಯನ್ನು ಪರಿಗಣಿಸಿರುವ ಧಾರವಾಡ ಕೃಷಿ ವಿಶ್ವವಿದ್ಯಾಲಯ ಡಾ.ಹರೀಶ್ ಡಿ.ಕೆ. ಅವರಿಗೆ ಪಿಎಚ್‌ಡಿ ಪದವಿ ನೀಡಿ ಅಧಿಸೂಚನೆ ಹೊರಡಿಸಿದೆ.

