Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೧೪ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಜಯಂತಿ
(ರಾಜ್ಯ ) ಜಿಲ್ಲೆ

ಏ.೧೪ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಜಯಂತಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಏಪ್ರಿಲ್ ೧೪ರಂದು ನಗರದ ಬಿ.ಆರ್.ಅಂಬೇಡ್ಕರ್ ವೃತ್ತದ ಮುಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೮ ಗಂಟೆಗೆ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ನಡೆಯಲಿದ್ದು, ನಗರದ ಬುದ್ಧವಿಹಾರ ಜಲನಗರದಿಂದ ಬಾಗಲಕೋಟೆ ಕ್ರಾಸ್, ಮಹಾತ್ಮಾ ಗಾಂಧೀ ವೃತ್ತದಿಂದ ಡಾ. ಬಿ.ಆರ್ ಅಂಬೇಡ್ಕರ್ ಭವನದವರೆಗೆ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಶಿಲೆಯಲ್ಲಿ ಕೆತ್ತಿಸಿದ ಸಂವಿಧಾನ ಪೀಠಿಕೆಯ ಉದ್ಘಾಟನಾ ಕಾರ್ಯಕ್ರಮ ನಗರದ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂದು ಬೆಳಿಗ್ಗೆ ೧೦ಕ್ಕೆ ನಡೆಯಲಿದೆ.
ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿನ ನವೀಕರಿಸಿದ ಗ್ರಂಥಾಲಯ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅವರ ಕುರಿತ ಸಂದೇಶ ಸಾರುವ ಛಾಯಾಚಿತ್ರಗಳ ಅನಾವರಣ ಹಾಗೂ ಜಯಂತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ ೧೦:೩೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ಪರಿಷತ್ತಿನ ಶಾಸಕರಾದ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಡಾ.ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ವಿ.ಪಾಟೀಲ, ಹಣಮಂತ ಆರ್ ನಿರಾಣಿ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ ಹಾಗೂ ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ಧಾರವಾಡ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹಾಗೂ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನಾನ್ ಮುಶ್ರೀಪ್ ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಅವರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಸಾಮಾಜಿಕ ನ್ಯಾಯ ಕುರಿತಾಗಿ ಸುಬ್ಬು ಹೊಲೆಯಾರ್, ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಆರ್ಥಿಕತೆಯ ಕುರಿತು ಶ್ರೀಮತಿ ಕೆ.ನೀಲಾ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಸಂವಿಧಾನ ರಚನೆ ವಿಷಯದ ಮೇಲೆ ಡಾ. ಜೆ.ಎಸ್.ಪಾಟೀಲ ಅವರು ಉಪನ್ಯಾಸ ನೀಡಲಿದ್ದಾರೆ.
ರಾವುತ ತಳಕೇರಿ ಕ್ರಾಂತಿ ಗೀತೆ ಹಾಗೂ ರಂಗನಾಥ ಬತ್ತಾಸಿ ಹಾಗೂ ತಂಡದವರು ನೃತ್ಯ ರೂಪಕ ಪ್ರಸ್ತುತಪಡಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.