ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಸೌಲಭ್ಯಕ್ಕಾಗಿ ೨೬ ವರ್ಗಗಳ ಅಸಂಘಟಿತ ಕಾರ್ಮಿಕರು ಈಗಾಗಲೇ ಗುರುತಿಸಿ ನೋಂದಾಯಿಸಲಾಗಿದ್ದು, ಹೊಸದಾಗಿ ಹಿಂದುಳಿದ ವರ್ಗಗಗಳ ಪ್ರವರ್ಗ -೧,೨ಎ,೩ಎ ಮತ್ತು ೩ಬಿಗೆ ಸೇರಿದ ಪಾರಂಪರಿಕ ವೃತ್ತಿಯಲ್ಲಿ ತೊಡಗಿರುವ ೩೮ ವರ್ಗಗಳು ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅರೆ ಅಲೆಮಾರಿ ಪಂಗಡಗಳ ಕುಲಕಸುಬಿನಲ್ಲಿ ತೊಡಗಿರುವ ೨೭ ವರ್ಗಗಳ ಕಾರ್ಮಿಕರು ಒಳಗೊಂಡಂತೆ ೬೫ ಅಸಂಘಟಿತ ಕಾರ್ಮಿಕರನ್ನು ಹೊಸದಾಗಿ ಸೇರ್ಪಡೆ ಂಆಡಿ ಒಟ್ಟಾರೆ ೯೧ ವರ್ಗಗಳ ಅಸಂಘಟಿತ ಕಾರ್ಮಿಕರ ಸೌಲಭ್ಯ ಪಡೆಯಲು ಆನಲೈನ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.
ಅಂಬೇಡ್ಕರ ಕಾರ್ಮಿಕ ಸಹಾಯ ಹಸ್ತ ಯೋಜನೆಯ ಸೌಲಭ್ಯದ ನೋಂದಣಿಗಾಗಿ ಇರಬೇಕಾದ ಅರ್ಹತೆ ರಾಜ್ಯದ ನಿವಾಸಿಗಳಾಗಿರಬೇಕು. ಅರ್ಜಿದಾರರು ೧೮ ರಿಂದ ೬೦ ವರ್ಷದವರಾಗಿರಬೇಕು. ಆದಾಯ ತೆರಗೆ ಪಾವತಿದಾರರಾಗಿರಬಾರದು. ಇಎಸ್‌ಐ ಮತ್ತು ಇಪಿಎಫ್ ಸೌಲಭ್ಯ ಹೊಂದಿರಬಾರದು.\
ಪಾಸ್ ಫೋರ್ಟ್ ಅಳತೆಯ ಇತ್ತೀಚಿನ ಭವಚಿತ್ರ, ವಯಸ್ಸಿನ ಪ್ರಮಾಣ ಪತ್ರಕ್ಕಾಗಿ ಆಧಾರ ಕಾರ್ಡ್, ಶಾಲಾ ದಾಕಲೆ, ಜನನ ಪ್ರಮಾಣ ಪತ್ರ,ಚಾಲನಾ ಪರವಾನಿಗೆ, ಪಾಸ್ ಪೋರ್ಟ್, ಚುನಾವಣಾ ಗುರುತಿನ ಚೀಟಿ, ಜನ್ಮ ದಿನಾಂಕ ದಾಖಲಿಸಿದ ಪ್ಯಾನ್ ಕಾರ್ಡ್, ಆಧಾರ ಕಾರ್ಡ್, ಲಭ್ಯವಿದ್ದಲ್ಲಿ ಪಡಿತರ ಚೀಟಿ,ಮತ್ತು ಬ್ಯಾಂಕ್ ಪಾಸ ಬುಕ್ ನೋಂದಣಿಗಾಗಿ ದಾಖಲೆಗಳನ್ನು ಸಲ್ಲಿಸಬೇಕು. ಜಾಲತಾಣ ತಿತಿತಿ.ಞsuತಿssb.ಞಚಿಡಿಟಿಚಿಣಚಿಞಚಿ.gov.iಟಿ ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ನೊಂದಾಯಿಸಿಕೊಂಡು ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಅಥವಾ ಆಯಾ ತಾಲೂಕಾ ಕಾರ್ಮಿಕ ಇಲಾಖೆ ಕಚೇರಿಗಳನ್ನು ಅಥವಾ ಸಂ.೧೫೫೨೧೪ ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ವಿಜಯಪುರ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
