Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಮೀನು ದಾಖಲೀಕರಣ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಿ
(ರಾಜ್ಯ ) ಜಿಲ್ಲೆ

ಜಮೀನು ದಾಖಲೀಕರಣ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸರ್ಕಾರದ ಮಹತ್ವಾಕಾಂಕ್ಷಿ ಭೂ ಸುರಕ್ಷಾ ಯೋಜನೆ | ಕಂದಾಯ ಇಲಾಖೆಯ ಆಯುಕ್ತ ಪಿ.ಸುನೀಲ ಕುಮಾರ್ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭೂ ಸುರಕ್ಷತೆ ದೃಷ್ಟಿಕೋನದಿಂದ ಜಮೀನು ದಾಖಲೀಕರಣ ಪ್ರಕ್ರಿಯನ್ನು ತ್ವರಿತಗೊಳಿಸಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಂದಾಯ ಇಲಾಖೆಯ ಆಯುಕ್ತರಾದ ಪಿ.ಸುನೀಲ ಕುಮಾರ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಬೆಳಿಗ್ಗೆ ಕಂದಾಯ ಇಲಾಖೆ ವಿವಿಧ ವಿಷಯಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಪ್ರತಿದಿನ ಒಬ್ಬ ಆಪರೇಟರ್ ಒಂದು ಸಾವಿರದಿಂದ ೨ ಸಾವಿರದಷ್ಟು ದಾಖಲಿಕರಣ ಕಾರ್ಯ ತ್ವರಿತಗೊಳಿಸುವ ಮೂಲಕ ದಾಖಲೀಕರಣ ಕಾರ್ಯಕ್ಕೆ ವೇಗ ನೀಡಿ, ಪ್ರಕ್ರಿಯೆ ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ರೈತರು ತಮ್ಮ ಜಮೀನಿನ ಮಾಹಿತಿಗಾಗಿ ಪದೇ ಪದೇ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ದಾಖಲೀಕರಣ ಅಗತ್ಯವಾಗಿದೆ. ಹಾಗೂ ಜಮೀನುಗಳ ಮೇಲೆ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಮಾಲೀಕರಿಗೆ ಈ ದಾಖಲಿಕರಣ ನೆರವಾಗುತ್ತದೆ ಎಂದು ಅವರು ಹೇಳಿದರು.
ಜಮೀನಿನ ಕುರಿತು ತಿದ್ದುಪಡಿಗೆ ಜಿಲ್ಲಾಧಿಕಾರಿಗಳಿಗೆ ಅವಕಾಶವಿದ್ದು, ಅಧಿಕಾರಿಗಳು ಜಮೀನಿನ ಕುರಿತು ಸ್ಥಳಕ್ಕೆ ಭೇಟಿ ನೀಡಿ ಖುದ್ದಾಗಿ ಪರಿಶೀಲನೆ ನಡೆಸಬೇಕು. ಹಾಗೂ ಆಧಾರ ಜೋಡಣೆಗೆ ಒತ್ತು ನೀಡಬೇಕು ಎಂದು ಅವರು ಹೇಳಿದರು.
ಸಾರ್ವಜನಿಕರಿಗೆ ಭೂದಾಖಲೆಗಳು ನಿರ್ಣಾಯಕ ದಾಖಲೆಗಳಾಗಿರುತ್ತವೆ. ಅಂತಹ ದಾಖಲೆಗಳನ್ನು ತ್ವರಿತ ಹಾಗೂ ಸುಲಭವಾಗಿ ಒದಗಿಸುವುದರಿಂದ ಸಾಕಷ್ಟು ಅನಾನೂಕೂಲತೆಯನ್ನು ನಿವಾರಿಸಬಹುದಾಗಿದೆ. ಸೀಮಿತ ಮಾನವ ಸಂಪನ್ಮೂಲ ಬಳಕೆ, ದಾಖಲೆ ಹುಡುಕುವ ಜಟಿಲತೆ-ಹಾನಿಯನ್ನು ಡಿಜೀಟಲಿಕರಣದಿಂದ ತಪ್ಪಿಸಿ, ಭೂದಾಖಲೆಗಳನ್ನು ಸಂರಕ್ಷಿಸಿ ನಿರ್ವಹಿಸಬಹುದಾಗಿದೆ. ಈ ಭೂ ಸುರಕ್ಷಾ ಯೋಜನೆಯಿಂದ ಮಹತ್ವದ ಭೂ ದಾಖಲೆಗಳ ಡಿಜಿಟಲ್ ರೂಪದಲ್ಲಿ ಶಾಶ್ವತವಾಗಿ ಸಂರಕ್ಷಿಸಬಹುದಾಗಿದೆ. ಭೌತಿಕ ಕಡತಗಳ ಬಳಕೆ ತಗ್ಗಿ, ಕಡತಗಳು ಶಿಥಿಲಾವಸ್ಥೆಗೊಳ್ಳುವುದು ತಪ್ಪಿಸಬಹುದಾಗಿದೆ. ಸಾರ್ವಜನಿಕರ ಕಚೇರಿ ಅಲೆದಾಟ ತಪ್ಪಿಸಿ, ಸಮಯದ ವ್ಯರ್ಥವೂ ಆಗುವುದಿಲ್ಲ ಆದ್ದರಿಂದ ಎಲ್ಲ ಡಿಜಿಟಲೀಕರಣ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅವರು ಸೂಚನೆ ನೀಡಿದರು.
ನಮೂನೆ-೧ರಿಂದ ೫ ರಡಿ ಅರ್ಜಿಗಳ ಇಂಡೀಕರಣ ಮತ್ತು ವಿಲೇವಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಪಹಣಿ ಪತ್ರಿಕೆಯೊಂದಿಗೆ ಆಧಾರ ಜೋಡಣೆ ಜಿಲ್ಲೆಯಲ್ಲಿ ಶೇ.೮೪.೪೭ ರಷ್ಟು ಪ್ರಗತಿ ಸಾಧಿಸಿದ್ದು, ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ತ್ವರಿತಗತಿಯಲ್ಲಿ ಪಹಣಿ ಪತ್ರಿಕೆಯೊಂದಿಗೆ ಆಧಾರ ಜೋಡಣೆ ಮಾಡಬೇಕು. ಲ್ಯಾಂಡ್ ಬೀಟ್ ಅರ್ಜಿಗಳ ಇಂಡೀಕರಣ ಮತ್ತು ವಿಲೇವಾರಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಶೇ.೯೮ರಷ್ಟು ಪ್ರಗತಿಯಾಗಿದೆ ಎಂದು ಅವರು ಹೇಳಿದರು.
ಕಂದಾಯ ನ್ಯಾಯಾಲಯಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ತಹಶೀಲ್ದಾರ ಹಂತದಲ್ಲಿ ೩ ತಿಂಗಳ ಹಾಗೂ ಉಪ ವಿಭಾಗಾಧಿಕಾರಿಗಳ ಹಂತದಲ್ಲಿ ೬ ತಿಂಗಳಕ್ಕೂ ಮೇಲ್ಪಟ್ಟ ಯಾವುದೇ ಬಾಕಿ ಉಳಿಸಿಕೊಳ್ಳದೇ ವಿಲೇವಾರಿ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರು, ವಿಜಯಪುರ ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಹೇಮಲತಾ ವಸ್ತ್ರದ ಸೇರಿದಂತೆ ಜಿಲ್ಲೆಯ ವಿವಿಧ ತಹಶೀಲ್ದಾರಗಳು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.