ಸಿಂದಗಿ: ಮಹಿಳೆಯರ ಸತತ ಹೋರಾಟದ ಫಲವಾಗಿ ಇಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮಹಿಳಾ ಮೀಸಲಾತಿ ಮಸೂದೆಗೆ ಅಂಗೀಕರಿಸಿ ಜಯ ದೊರಕಿಸಿಕೊಟ್ಟಿದೆ ಎಂದು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿಲ್ಪಾ ಕುದರಗೊಂಡ ಹೇಳಿದರು.
ಪಟ್ಟಣದ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಹಮ್ಮಿಕೊಂಡ ವಿಜಯೋತ್ಸದಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸಿರುವುದು ಇಡೀ ದೇಶದ ಮಹಿಳೆಯರು ಖುಷಿ ಪಡುವ ವಿಚಾರವಾಗಿದೆ. ಮಹಿಳೆಯರಿಗೆ ಹೆಚ್ಚು ಮೀಸಲಾತಿ ನೀಡಿದ್ದೆಯಾದಲ್ಲಿ ದೇಶವನ್ನು ಉತ್ತಮ ರೀತಿಯಲ್ಲಿ ಮುನ್ನೆಡೆಸಿಕೊಂಡು ಹೋಗುತ್ತಾರೆ ಎಂಬುದನ್ನು ಗಮನಿಸಿದ ಮೋದಿ ಅವರು ಮೀಸಲಾತಿ ಮಸೂದೆ ಮಂಡಿಸಿ ಅನುಮೋದನೆ ಪಡೆದಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಇದೇ ವೇಳೆ ಬಿಜೆಪಿ ಮಹಿಳಾ ಮೋರ್ಚಾ ತಾಲೂಕಾಧ್ಯಕ್ಷೆ ನೀಲಮ್ಮ ಯಡ್ರಾಮಿ, ಅನಸೂಯಾ ಪರಗೊಂಡ, ಶಾರದಾ ಮಂಗಳೂರ, ಜಯಶ್ರೀ ನಾಟೀಕಾರ್, ಅನ್ನಪೂರ್ಣ ದೇವ್ಕರ್, ಶ್ರೀದೇವಿ ಬಿರಾದಾರ ಸೇರಿದಂತೆ ಅನೇಕ ಮಹಿಳೆಯರು ಇದ್ದರು.