ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಭೈರವಾಡಗಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪಿ.ಯು ದ್ವಿತೀಯ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿನಿ ವಿಜಯಲಕ್ಷ್ಮಿ ಹೊಕ್ಕುಂಡಿ ಶಿಕ್ಷಣಶಾಸ್ತ್ರ ಹಾಗೂ ರಾಜ್ಯಶಾಸ್ತ್ರ ವಿಷಯಗಳಲ್ಲಿ ೧೦೦ಕ್ಕೆ ೧೦೦ ಅಂಕ ಗಳಿಸಿ ಶೇ. ೯೫ ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.
ಚೈತ್ರಾ ಮಡ್ಡೆಪ್ಪಗೋಳ (ಶೇ ೯೦) ದ್ವಿತೀಯ ಸ್ಥಾನ ಪಡೆದಿದ್ದಾಳೆ. ವಿದ್ಯಾರ್ಥಿನೀಯರ ಸಾಧನೆಗೆ ಪ್ರಾಚಾರ್ಯ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದೆ.

