ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಡಾ.ಅಂಬೇಡ್ಕರ್ ಯಾವುದೇ ಜಾತಿ, ಧರ್ಮ, ಮತ, ಪಂಥಗಳಿಗೆ ಸೀಮಿತವಾಗದೇ ಮಹಾಮಾನವತಾವಾದಿಯಾಗಿ ವಿಶ್ವಮಾನವರೆನಿಸಿದ್ದಾರೆ ಎಂದು ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಹೇಳಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಜರುಗಿದ ಡಾ.ಅಂಬೇಡ್ಕರವರ ೧೩೪ ನೇ ಜಯಂತಿಯಲ್ಲಿ ಪಾಲ್ಗೊಂಡು, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರ ಮೂಲಕ ಪಟ್ಟಣ ಪಂಚಾಯಿತಿ ಸಭಾಭವನದ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಂಬೇಡ್ಕರ್ ಅವರ ಸಮಗ್ರ ಜೀವನವೇ ಆದರ್ಶ. ಇವರು ಮಾನವೀಯ ಮೌಲ್ಯಗಳು, ಶಿಕ್ಷಣ ಹಾಗೂ ಸಮಾನತೆಯ ಪ್ರತಿಪಾದನೆಯ ಪ್ರಮುಖ ಹರಿಕಾರರೇನಿಸಿದ್ದಾರೆ ಎಂದರು.
ತಾಳಿಕೋಟಿ ಎಸ್.ಕೆ.ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥೆ ಸುಜಾತಾ ಚಲವಾದಿ ಅಂಬೇಡ್ಕರ್ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಜಯಂತಿ ಅಂಗವಾಗಿ ಅಂಬೇಡ್ಕರ್ ವೃತ್ತದಿಂದ ಮೊಹರೆ ಹಣಮಂತ್ರಾಯ ವೃತ್ತದವರೆಗೆ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ಜರುಗಿತು. ನಂತರ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಕಾರ್ಯಕ್ರಮ ಜರುಗಿತು.
ತಹಶೀಲ್ದಾರ ಪ್ರಕಾಶ ಸಿಂದಗಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ದೇವಣಗಾಂವ, ಉಪಾಧ್ಯಕ್ಷ ರಮೇಶ ಮಸಬಿನಾಳ, ಮುಖ್ಯಾಧಿಕಾರಿ ಸುರೇಖಾ ಬಾಗಲಕೋಟ, ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಶಿರಸ್ತೇದಾರ ಎಸ್.ಎಸ್.ಮ್ಯಾಕೇರಿ, ಸಮಾಜ ಕಲ್ಯಾಣ ಇಲಾಖೆಯ ಪೂಜಾ ನಿಕ್ಕಮ್, ಎಸ್.ಎಸ್.ಲಾತೂರ, ನಫೀಸಾ ಬೇಗಂ, ಕಂದಾಯ ನಿರೀಕ್ಷಕ ಸಂಗಮೇಶ ಗ್ವಾಳೇದ ವೈ.ಜಿ.ಗಂಗಶೆಟ್ಟಿ, ವಿಜಯಲಕ್ಷ್ಮಿ ನವಲಿ ಸಮುದಾಯದ ಪ್ರಮುಖರಾದ ಪ್ರಕಾಶ ಮಲ್ಲಾರಿ, ಪ್ರಕಾಶ ಗುಡಿಮನಿ, ರಮೇಶ ಮ್ಯಾಕೇರಿ, ರಾಘವೇಂದ್ರ ಗುಡಿಮನಿ, ಮಾಂತೇಶ ದೊಡಮನಿ, ರಾಜಕುಮಾರ ಸಿಂದಗೇರಿ ಸೇರಿದಂತೆ ವಿವಿಧ ದಲಿತಪರ ಸಂಘಟನೆಗಳ ಪ್ರಮುಖರು, ಪದಾಧಿಕಾರಿಗಳು ಇದ್ದರು.

