Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಅಂಬೇಡ್ಕರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
(ರಾಜ್ಯ ) ಜಿಲ್ಲೆ

ಡಾ.ಅಂಬೇಡ್ಕರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಸಂವಿಧಾನ ನೀಡಿರುವ ಅವಕಾಶಗಳನ್ನು ನಾವು ನೀವು ಪಡೆದು, ಅಂಬೇಡ್ಕರ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಬದುಕು ಕಟ್ಟಿ ಕೊಳ್ಳೋಣ ಎಂದು ತಹಶೀಲ್ದಾರ ಎಸ್.ಎಸ್. ನಾಯಕಲಮಠ ಹೇಳಿದರು.

ಪಟ್ಟಣದ ಸಮುದಾಯ ಭವನದಲ್ಲಿ ತಾಲೂಕು ಆಡಳಿತದಿಂದ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಾ.ಬಿ.ಆರ್. ಅಂಬೇಡ್ಕರ ಹಾಗೂ ಡಾ.ಬಾಬು ಜಗಜೀವನರಾಂ ರವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳು, ಚಿಂತನೆಗಳು ಸದಾ ನಮ್ಮಗೆಲ್ಲ ಪ್ರೇರಣಾದಾಯಿ ಎಂದರು.

ಉಪನ್ಯಾಸಕರಾಗಿ ಶಿಕ್ಷಕ ಎನ್.ಎ. ಬನಸೋಡೆ ಮಾತನಾಡಿ ಇಂದು ಭಾರತದ ಪ್ರತಿಯೊಬ್ಬ ನಾಗರಿಕನೂ ಸಮಾನತೆ ಮತ್ತು ಅವಕಾಶಗಳನ್ನು ಪಡೆಯಲು ಸಂವಿಧಾನ ನೀಡಿದ ಕೊಡುಗೆ ಎಂದು ಹೇಳಿದರು.

ಉಪನ್ಯಾಸಕರಾಗಿ ಶಿಕ್ಷಕಿ ರುದ್ರಮ್ಮ ಗಿಡ್ಡಪ್ಪಗೋಳ ಮಾತನಾಡಿ ದೇಶದ ಜನರಲ್ಲಿ ನಾವೆಲ್ಲರೂ ಒಂದೇ ಎಂಬ ಭಾವನೆ ಮತ್ತು ಸಮಾಜದ ಅಂಕುಡೊಂಕು ತಿದ್ದಿ ಉತ್ತಮ ಸಮಾಜದ ನಿರ್ಮಾಣಕ್ಕೆ ಅಡಿಪಾಯ ಹಾಕಿದ ಮೊದಲಿಗರು ಅಂಬೇಡ್ಕರರು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮನು ಪತ್ತಾರ ಸಂವಿಧಾನ ಪೀಠಿಕೆ ಪಠಣ ಮಾಡಿದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಪಪಂ ಉಪಾಧ್ಯಕ್ಷೆ ರಾಜಮಾ ನದಾಫ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮದ್ದೀನ, ಪಪಂ ಮುಖ್ಯಾಧಿಕಾರಿ ಉಮೇಶ ಚಲವಾದಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮನು ಪತ್ತಾರ, ಪಿಎಸ್ಐ ಎಮ್.ಬಿ. ಬಿರಾದಾರ, ಆರೋಗ್ಯ ಅಧಿಕಾರಿ ಲಕ್ಷ್ಮೀ ತೆಲ್ಲೂರು, ಹೆಸ್ಕಾಂ ಅಧಿಕಾರಿ ಎಸ್.ಎಸ್. ಪಡಸಲಗಿ, ಕೃಷಿ ಅಧಿಕಾರಿ ಎಂ.ಕೆ. ಪುರೋಹಿತ, ಶಿಕ್ಷಣ ಸಂಯೋಜಕ ವಿ.ಎಚ್. ಪುರೋಹಿತ, ಪಶುಸಂಗೋಪನೆ ಅಧಿಕಾರಿ ವೆಂಕಟೇಶ ವಾಲಿಕಾರ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರು, ಡಿಎಸ್ಎಸ್ ಸಂಘದ ಸರ್ವ ಸದಸ್ಯರು, ವಿವಿಧ ಇಲಾಖೆಗಳ ಸಿಬ್ಬಂದಿ ವರ್ಗದವರು ಸ್ಥಳೀಯ ಶಾಲಾ ಕಾಲೇಜುಗಳ ಮುಖ್ಯಸ್ಥರು, ಶಿಕ್ಷಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ದಲಿತಪರ ಸಂಘಟನೆಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಮೆರವಣಿಗೆ: ಕಾರ್ಯಕ್ರಮದ ಮೊದಲು ದಿಗಂಬರೇಶ್ವರ ಮಠದ ಯೋಗಿ ಕಲ್ಲಿನಾಥ ಶ್ರೀಗಳು, ಪಟ್ಟಣ ಪಂಚಾಯತಿ ಅಧ್ಯಕ್ಷ ಚನಮಲ್ಲಪ್ಪ ಗಿಡ್ಡಪ್ಪಗೋಳ, ಮಾಜಿ ಜಿಪಂ ಸದಸ್ಯ ಕಲ್ಲು ದೇಸಾಯಿ, ರಫೀಕ ಪಕಾಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಹಾಗೂ ಮಾಜಿ ಉಪ ಪ್ರಧಾನಿ ಡಾ ಬಾಬು ಜಗಜೀವನ ರಾಮ್ ರವರ ಭಾವಚಿತ್ರಗಳನ್ನು ಅಳವಡಿಸಿದ್ದ ಭವ್ಯವಾದ ರಥಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿದರು.
ನಂತರ ದಿಗಂಬರೇಶ್ವರ ಮಠದಿಂದ ಪ್ರಾರಂಭಗೊಂಡ ಮೆರವಣಿಗೆಗೆ ಮಾಜಿ ಜಿಪಂ ಸದಸ್ಯ ಕಲ್ಲು ದೇಸಾಯಿ ಚಾಲನೆ ನೀಡಿದರು. ಮೆರವಣಿಗೆಯು ದಿಗಂಬರೇಶ್ವರ ಮಠದಿಂದ ಪ್ರಾರಂಭಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಾಲೂಕು ಪಂಚಾಯತಿ ಹತ್ತಿರದ ಸಭಾ ಭವನವನ್ನು ತಲುಪಿತು. ಪಟ್ಟಣದ ಮಹಾತ್ಮಾ ಗಾಂಧೀಜಿ ವೃತ್ತಕ್ಕೆ ಮೆರವಣಿಗೆ ಆಗಮಿಸುತ್ತಿದ್ದಂತೆ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿಯವರು ಡಾ.ಬಿ.ಆರ್. ಅಂಬೇಡ್ಕರ ಹಾಗೂ ಡಾ.ಬಾಬು ಜಗಜೀವನರಾಮ್ ರವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿದರು.
ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಗೊಂಬೆ ಕುಣಿತ, ಹಲಗೆ ಮಜಲು ಹಾಗೂ ಮಹಿಳೆಯರ ಆರತಿ ಮೆರವಣಿಗೆಗೆ ಶೋಭೆ ತಂದವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.