Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಅಂಬೇಡ್ಕರ್ ವಿಚಾರಧಾರೆ ಪಾಲನೆ ಮಾಡುವವರೇ ನಿಜ ಅನುಯಾಯಿ
(ರಾಜ್ಯ ) ಜಿಲ್ಲೆ

ಡಾ.ಅಂಬೇಡ್ಕರ್ ವಿಚಾರಧಾರೆ ಪಾಲನೆ ಮಾಡುವವರೇ ನಿಜ ಅನುಯಾಯಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ಅಂಬೇಡ್ಕರ್ ವಂಶಜ ರಾಜರತ್ನ ಅಂಬೇಡ್ಕರ್ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಅಂಬೇಡ್ಕರ್ ವಿಚಾರಧಾರೆ ಪಾಲನೆ ಮಾಡುವವರು ಅವರ ನಿಜವಾದ ಅನುಯಾಯಿಗಳು. ಅವರ ಸಿದ್ದಾಂತವನ್ನು ಅನುಸರಿಸುವ ಮೂಲಕ ಅನುಯಾಯಿಗಳಾಗಬೇಕು. ದಲಿತರು ಯಾರನ್ನೂ ಅವಲಂಭಿಸಬಾರದು ಎಂಬುದು ಅಂಬೇಡ್ಕರ್ ಅವರ ಇಚ್ಚೆಯಾಗಿತ್ತು. ಅದರೀಗ ದಲಿತರು ಹಿತಕಾಯುವ ಸಂವಿಧಾನವನ್ನು ದುರ್ಬಲಗೊಳಿಸಿ, ಸರಕಾರಿ ಸಂಸ್ಥೆಗಳೆಲ್ಲವನ್ನೂ ಹಾನಿ ಮಾಡಲಾಗುತ್ತಿದೆ. ಇದು ಬಾಬಾ ಸಾಹೇಬರಿಗೆ ಮೊದಲೇ ಗೊತ್ತಿತ್ತು. ಹೀಗಾಗಿ ದಲಿತರ ಹಿತಾಸಕ್ತಿ ರಕ್ಷಣೆಗಾಗಿ ಅವರು ಸಂವಿಧಾನವೊಂದನ್ನೇ ಕೊಟ್ಟು ಹೋಗಿಲ್ಲ. ಬುದ್ಧ ಮಾರ್ಗವನ್ನೂ ಬಿಟ್ಟು ಹೋಗಿದ್ದಾರೆ. ಸಂವಿಧಾನ ನಮ್ಮನ್ನು ರಕ್ಷಣೆ ಮಾಡದಿದ್ದರೆ ಇದುವೇ ನಮ್ಮ ರಕ್ಷಣೆಗೆ ಬರಲಿದೆ ಎಂದು ಅಂಬೇಡ್ಕರ್ ವಂಶಜ ರಾಜರತ್ನ ಅಂಬೇಡ್ಕರ್ ಹೇಳಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ, ಸಿಂದಗಿ ಜೈಭೀಮ ನಗರ ಹಾಗೂ ದಲಿತ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಭೀಮರಾಯಗೌಡ ಬಿರಾದಾರ ಮಾಗಣಗೇರಿ ಮಹಾವೇದಿಕೆಯಲ್ಲಿ ಹಮ್ಮಿಕೊಂಡ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೆಯ ಜಯಂತ್ಯುತ್ಸವ ಮತ್ತು ಬುದ್ಧವಂದನೆ ಹಾಗೂ ಬಹಿರಂಗ ಸಮಾವೇಶ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ, ಸದ್ಯ ದೇಶದಲ್ಲಿ ಸಂವಿಧಾನ ತಿದ್ದುಪಡಿ ಮೀಸಲಾತಿ ಕಿತ್ತುಕೊಳ್ಳುವ ಹುನ್ನಾರ ಮನುವಾದಿಗಳು ಮಾಡುತ್ತಿದ್ದು, ಇದರ ಬಗ್ಗೆ ಎಲ್ಲರೂ ಎಚ್ಚರದ ಹೆಜ್ಜೆ ಇಡುವ ಮುಖೇನ ಜಾಗೃತ ವಹಿಸಬೇಕು. ದಲಿತರಿಗಾಗಿ ಅಂಬೇಡ್ಕರ್ ಅವರು ಪಟ್ಟಿರುವ ಶ್ರಮವನ್ನು ನಾವಿಂದು ನೆನಪಿಸಿ ಮುನ್ನಡೆಯಬೇಕಿದೆ. ಡಾ.ಅಂಬೇಡ್ಕರರು ಇಲ್ಲವಾಗಿದ್ದರೆ ನಾವಿಲ್ಲಿದ್ದೇವೆ ಎಂದು ಗೊತ್ತಾಗುತ್ತಿರಲಿಲ್ಲ ಎಂದು ನುಡಿದರು.
ಅದಕ್ಕೆ ಸಂವಿಧಾನ ಪೀಠಿಕೆಯ ಮಹತ್ವ ಅರಿತು ಅದಕ್ಕೆ ತೊಡಕುಂಟು ಮಾಡುತ್ತಿರುವ ಶಕ್ತಿಯನ್ನು ದೂರವಿರಿಸಬೇಕು. ಇಂದು ಅಂಬೇಡ್ಕರ್ ಜಯಂತಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟು ವ್ಯಕ್ತಿಯ ಸ್ಪೂರ್ತಿದಾಯಕ ಪ್ರಯಾಣವನ್ನು ಆಧರಿಸಿದೆ. ಶತಮಾನದಿಂದಲೂ ಭಾರತ ದೇಶದಲ್ಲಿರುವ ಜಾತಿ ವ್ಯವಸ್ಥೆಯನ್ನು ಮೀರಿ ಸಮಾನತೆ ಹಾಗೂ ಸಾಮಾಜಿಕ ನ್ಯಾಯವನ್ನು ಹೊಂದಲು ಡಾ.ಬಿ.ಆರ್.ಅಂಬೇಡ್ಕರ್ ಅವರ ಶ್ರಮ ಮತ್ತು ಹೋರಾಟವನ್ನು ನಾವುಗಳು ಸ್ಮರಿಸಿಕೊಳ್ಳಬೇಕಾಗಿದೆ ಎಂದರು.
ಈ ವೇಳೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಸಕ ಅಶೋಕ ಮನಗೂಳಿ ಮಾತನಾಡಿ, ಅಂಬೇಡ್ಕರ ಅವರ ಹೋರಾಟ, ಅವರು ಹಾಕಿಕೊಟ್ಟ ಸಂವಿಧಾನದಿಂದ ನಾವು ಮಾನವರಾಗಿ ಬಾಳುತ್ತಿದ್ದೇವೆ. ಈ ಭೂಮಿ ಇರುವವರೆಗೂ ಸಂವಿಧಾನ ಉಳಿಯಬೇಕು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಗಳನ್ನು ಪೂಜಿಸಿ, ಅನುಸರಿಸಿ ಅವರ ತತ್ವಾದಾರ್ಶಗಳನ್ನು ಪಾಲಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಮಾಜಿ ಶಾಸಕ ರಮೇಶ ಭೂಸನೂರ, ಆಲಮೇಲ ಪಪಂ ಅಧ್ಯಕ್ಷ ಸಾದಿಕ್ ಸುಂಬಡ ಮಾತನಾಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಿಂದಗಿ ಬುದ್ಧವಿಹಾರ ಧಮ್ಮ ವಿಜಯಾ ಭಂತೆ ಸಂಘಪಾಲ ಬಂತೇಜ ವಹಿಸಿ ಆಶೀರ್ವಚನ ನೀಡಿದರು.
ಬಹಿರಂಗ ಸಭೆಯಲ್ಲಿ ಪ್ರಶಾಂತ ಸುಣಗಾರ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ರಾಜಶೇಖರ ಕೂಚಬಾಳ, ಚಂದ್ರಕಾಂತ ಸಿಂಗೆ, ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ರಾಕೇಶ ಕಲ್ಲೂರ, ಸಲಿಂಪಟೇಲ್ ಮರ್ತೂರ, ಗೊಲ್ಲಾಳಪ್ಪಗೌಡ ಮಾಗಣಗೇರಿ, ಪೀರು ಕೆರೂರ, ಸಂತೋಷ ಪಾಟೀಲ, ಭೀಮು ಬಮ್ಮನಹಳ್ಳಿ, ಯಮನಪ್ಪ ಹೊಸಮನಿ, ಶೈಲಜಾ ಸ್ಥಾವರಮಠ, ಅಂಬಿಕಾ ಪಾಟೀಲ, ಎಸ್.ಎಂ.ಚಿಗರಿ, ಸೈನಾಜ ಮಸಳಿ, ರಾಮು ಅಗ್ನಿ, ಪರಶುರಾಮ ಕಾಂಬಳೆ ಸೇರಿದಂತೆ ಅಂಬೇಡ್ಕರ್ ಅವರ ಅನುಯಾಯಿಗಳು ಮತ್ತು ಅಭಿಮಾನಿಗಳು ಇದ್ದರು.

“ಬುದ್ಧ ಮಾರ್ಗವನ್ನು ಪ್ರಧಾನಿ ಮೋದಿ ಸೇರಿದಂತೆ ಸಂಘ ಪರಿವಾರ ಪಾಲನೆ ಮಾಡುತ್ತಿದೆ. ಈ ಮೂಲಕ ಮನುವಾದ ವ್ಯವಸ್ಥೆ, ವಿಚಾರಧಾರೆಯನ್ನು ನಿರ್ಮಿಸಿಕೊಳ್ಳಲಾಗುತ್ತಿಲ್ಲ. ಆದರೆ ಬುದ್ಧ ವಿಚಾರವನ್ನು ದಲಿತರೇ ಪಾಲನೆ ಮಾಡುತ್ತಿಲ್ಲ.”

– ರಾಜರತ್ನ ಅಂಬೇಡ್ಕರ್
ಅಂಬೇಡ್ಕರ್ ವಂಶಜರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.