ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ೨೦೨೫-೨೬ನೇ ಸಾಲಿನ ಪ್ರತಿಷ್ಟಿತ ಶಾಲೆ ಯೋಜನೆಯಡಿ ಜಿಲ್ಲೆಯ ಪ್ರತಿಷ್ಟಿತ ಶಾಲೆಗಳಿಗೆ ೬ನೇ ತರಗತಿ ಪ್ರವೇಶ ಪರೀಕ್ಷೆಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಇಲಾಖೆ ವೆಬ್ ಸೈಟ್ https://swd.karnataka.gov.inನಲ್ಲಿ ದಿನಾಂಕ:೦೩-೦೫-೨೦೨೫ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
