Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದು ಬಾಗಲಕೋಟೆಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ
(ರಾಜ್ಯ ) ಜಿಲ್ಲೆ

ಇಂದು ಬಾಗಲಕೋಟೆಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾಂಗ್ರೆಸ್ ಸರ್ಕಾರದಿಂದ ಮುಸ್ಲಿಂ ಓಲೈಕೆ, ದಲಿತರ ಹಣ ಲೂಟಿ, ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ :ಶಾಸಕ ಗುಡಗುಂಟಿ

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಬಾಗಲಕೊಟೆಯಲ್ಲಿ ಇಂದು ಬಿಜೆಪಿಯಿಂದ ಜನಾಕ್ರೋಶ ಯಾತ್ರೆ ನಡೆಯಲಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.
ಮಂಗಳವಾರ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿಯ ವಿರುದ್ದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಅಭಿವೃದ್ಧಿ ಯೋಜನೆಯ 38,860 ಕೋಟಿ ಹಣವನ್ನು ದುರ್ಬಳಕೆಮಾಡಿಕೊಂಡಿದೆ. ಎಸ್‌ಸಿಎಸ್‌ಪಿ, ಟಿಎಸ್‌ಪಿಯ ಸುಮಾರು 10 ಸಾವಿರ ಕೋಟಿ ಹಣವನ್ನು ಅಲ್ಪಸಂಖ್ಯಾತರಿಗೆ ವರ್ಗಮಾಡಿದೆ. ಮಿತಿ ಮೀರಿ ಮುಸ್ಲಿಂ ಓಲೈಕೆ ಮಾಡುತ್ತಿದ್ದು, ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ, ಶಾದಿ ಭಾಗ್ಯಕ್ಕೆ ₹50 ಸಾವಿರ, ಉರ್ದು ಶಾಲೆಗಳಿಗೆ 500 ಕೊಟಿ, ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಆಭ್ಯಾಸಕ್ಕೆ 30 ಲಕ್ಷ, ಅಭಿವೃದ್ಧಿಗೆ ₹4500 ಕೋಟಿ ಮೀಸಲು, ಕಾಲೋನಿಗಳ ಅಭಿವೃದ್ಧಿಗೆ ಸಾವಿರಕೋಟಿ ಮೀಸಲಿಟ್ಟು ಉಳಿದ ಸಮಾಜಗಳನ್ನು ಕಡೆಗಣಿಸಿದೆ ಎಂದು ದೂರಿದರು.
ಹಾಲಿನ ದರ 69 ಹೆಚ್ಚಳ, ಪೆಟ್ರೋಲ್ ಡೀಸೆಲ್ 3ರೂ ಈ ರೀತಿ ಹೆಚ್ಚಳ, ವಿದ್ಯುತ್ 235 ಪೈಸೆ ಪ್ರತಿ ಯುನಿಟ್‌ಗೆ ಹೆಚ್ಚಳ, ಸ್ಮಾರ್ಟ್ ಮೀಟರ್ 950 ರಿಂದ 25 ಸಾವಿರಕ್ಕೆ ಏರಿಕೆ, 30 ಸಾವಿರದ ಟಿಸಿ 3 ಲಕ್ಷಕ್ಕೆ ಏರಿಕೆ, ವಾಲ್ಮೀಕಿ ಇಲಾಖೆಯಲ್ಲಿ 187 ಕೋಟಿ ಹಗರಣ, ಕಾರ್ಮಿಕ ಇಲಾಖೆಯಲ್ಲಿ 82 ಸಾವಿರ ಕೋಟಿ, ಇಂಧನ ಇಲಾಖೆಯ ಸ್ಟಾರ್ಟ್ ಮೀಟರ್ ಖರೀದಿಯಲ್ಲಿ ₹15500 ಕೋಟಿ, ಅಬಕಾರಿಯಲ್ಲಿ ₹700 ಕೋಟಿ ಹಗರಣ ಮಾಡಿದ್ದರ ವಿರುದ್ಧ ಜನಾಕ್ರೋಶ ಯಾತ್ರೆ ನಡೆಯಲಿದೆ ಎಂದರು.
ಬೆಳಗ್ಗೆ ಡಾ.ಅಂಬೇಡ್ಕರ ವೃತ್ತದಿಂದ ಮೆರವಣಿಗೆ ಪ್ರಾರಂಭವಾಗಲಿದೆ. ಬಸವೇಶ್ವರ ವೃತ್ತದಲ್ಲಿ ಸಮಾರೋಪಗೊಳ್ಳಲಿದೆ. ಸುಮಾರು 20 ಸಾವಿರ ಜನ ಸೇರುವ ನಿರೀಕ್ಷೆ ಇದ್ದು ಜಮಖಂಡಿಯಿಂದ 150 ವಾಹನಗಳ ಮುಖಾಂತರ 2 ಸಾವಿರ ಜನರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ರಾಜ್ಯ ಬಿಜೆಪಿ ಮಹಿಳಾ ಮೋ ರ್ಚಾದ ಉಪಾಧ್ಯಕ್ಷೆ ಡಾ.ವಿಜಯ ಲಕ್ಷ್ಮೀ ತುಂಗಳಮಾತನಾಡಿ, ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಕಳಪೆ ಗುಣಮಟ್ಟದ ಬ್ಯಾಕ್ಟಿರಿಯಾ ಗಳಿಂದ ಕೂಡಿದ ಆರ್‌ಎಲ್ ಸಲಾಯನ್ ದ್ರಾವಣ ಬಳಕೆಯಿಂದಾಗಿದೆ. ಸರ್ಕಾರ ಇದರ ಬಗ್ಗೆ ಕ್ರಮ ಜರುಗಿಸಿಲ್ಲ. ಜತೆಗೆ ದ್ರಾವಣವನ್ನು ಖರೀದಿಸಿದೆ. ಔಷಧಿಗಳ ಖರೀದಿಯಲ್ಲೂ ದೊಡ್ಡ ಹಗರಣ ಆಗಿದೆ. ತನಿಖೆ ನಡೆಯಬೇಕಿದೆ. ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದ್ದು ಸಾರ್ವಜನಿಕರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಕಾರ್ಯದರ್ಶಿ ಸಿ.ಟಿ. ಉಪಾಧ್ಯ ಮಾತನಾಡಿ, ರಾಜ್ಯ ಸರ್ಕಾರ ರೈತ ವಿರೋಧಿ ಹಾಗೂ ಜನವಿರೋಧಿ ಯಾಗಿದೆ. ಬೊಮ್ಮಾಯಿ ಅವರ ಕಾಲ ದಲ್ಲಿ ಪ್ರತಿಕ್ಷೇತ್ರಕ್ಕೆ 200 ಗಂಗಾ ಕಲ್ಯಾಣ ಯೋಜನೆಗಳನ್ನು ನೀಡಲಾಗುತ್ತಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಅವರು 3-4 ಕ್ಕೆ ಇಳಿಸಿದ್ದಾರೆ. ವಾಸ್ತವದಿಂದ ದೂರವಿರುವ ಜನಗಣತಿಯ ವರದಿ ಯನ್ನು ಮಂಡಿಸಲು ಹೊರಟಿರುವ ರಾಜ್ಯ ಸರ್ಕಾರ ಗೊಂದಲ ಸೃಷ್ಟಿಸಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕೆ ಮುಂದಾಗುತ್ತಿಲ್ಲ. ಸದ್ಯ ನದಿ ತೀರದ ಗ್ರಾಮಗಳಲ್ಲಿ ನೀರಿನ ತೊಂದರೆಯಾಗಿದ್ದು ಮಹಾರಾಷ್ಟ್ರದಿಂದ ನೀರು ಬಿಡಿಸುವ ಪ್ರಯತ್ನವನ್ನು ಮಾಡುತ್ತಿಲ್ಲ ಎಂದು ದೂರಿದರು.
ಈ ವೇಳೆ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷಸಂಗು ದಳವಾಯಿ, ಗ್ರಾಮೀಣ ಮಂಡಲ ಅಧ್ಯಕ್ಷ ಮಲ್ಲು ದಾನಗೌಡ, ನಗರ ಮಂಡಲ ಅಧ್ಯಕ್ಷ ಅಜಯ ಕಡಪಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಗಣೇಶ ಶಿರಗಣ್ಣವರ, ಪ್ರದೀಪನಂದೆಪ್ಪನವರ, ಪ್ರಮುಖರಾದ ಸುರೇಶಗೌಡ ಪಾಟೀಲ, ಮಾಧ್ಯಮ ಸಂಚಾಲಕ ಶ್ರೀಧರ ಕಂಬಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.