ವಿಜಯಪುರದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಕೀಲ್ ಬಾಗಮಾರೆ ಮನವಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪದೇ ಪದೇ ಶಾಂತಿ, ಸೌಹಾರ್ದತೆ ಕದಡುವ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಒತ್ತಡ ಹೇರುವಂತೆ ಒತ್ತಾಯಿಸಿ ವಿಜಯಪುರದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಕೀಲ್ ಬಾಗಮಾರೆ ನೇತೃತ್ವದ ನಿಯೋಗ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರಿಗೆ ಮನವಿ ಸಲ್ಲಿಸಿದರು.
ಬಿಜೆಪಿಯಿಂದ ಉಚ್ಚಾಟಿತವಾಗಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮುಸ್ಲಿಂ ಸಮುದಾಯದ ವಿರುದ್ಧ ನಿತ್ಯ ಅಪಮಾನಕಾರಿ ಭಾಷೆ ಬಳಸಿ, ಅವರನ್ನು ಪಾಕಿಸ್ತಾನೀ ಎಂದು ಕರೆಯುತ್ತಿದ್ದಾರೆ. ಪ್ರವಾದಿರವರ ಹಾಗೂ ಮುಸ್ಲಿಮರ ನಾಯಕರಾದ ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಅವರನ್ನು ಕೂಡ ನಿಂದಿಸುತ್ತಾರೆ. ಆದರೆ ಈ ಬಾರಿ ಇವರು ತಮ್ಮ ಅವಹೇನಕಾರಿ ಭಾಷನದ ಮೂಲಕ ಹುಬ್ಬಳ್ಳಿಯಲ್ಲಿ ರಾಮನವಮಿ ದಿನ ಮುಸ್ಲಿಂ ಧರ್ಮದ ಪ್ರವಾದಿ ಮುಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಶಕೀಲ್ ಬಾಗಮಾರೆ ತಿಳಿಸಿದರು.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೋಮು ಸಾಮರಸ್ಯ ಹಾಳು ಮಾಡುತ್ತಿರುವ ಶಾಸಕರನ್ನು ತಕ್ಷಣವೇ ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.

