Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿದ್ದೇಶ್ವರ ಸಂಸ್ಥೆಯಿಂದ ತಾಲ್ಲೂಕಿಗೊಂದು ಪಬ್ಲಿಕ್ ಶಾಲೆ
(ರಾಜ್ಯ ) ಜಿಲ್ಲೆ

ಸಿದ್ದೇಶ್ವರ ಸಂಸ್ಥೆಯಿಂದ ತಾಲ್ಲೂಕಿಗೊಂದು ಪಬ್ಲಿಕ್ ಶಾಲೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶ್ರೀ ಸಿದ್ದೇಶ್ವರ ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆ

ವಿಜಯಪುರ: ಶತಮಾನ ಕಂಡ ಶ್ರೀ ಸಿದ್ದೇಶ್ವರ ಸಂಸ್ಥೆ ಹೆಮ್ಮರವಾಗಿ ಬೆಳೆದು ನಿಂತಿದ್ದು, ಧಾರ್ಮಿಕ, ಸಾಮಾಜಿಕ ಕಾರ್ಯಗಳೊಂದಿಗೆ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ತನ್ನದೆಯಾದ ಮಹತ್ತರ ಕಾರ್ಯ ಮಾಡಲಾಗುತ್ತಿದೆ ಎಂದು ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ಹೇಳಿದರು.
ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಡಾ.ಫ.ಗು.ಹಳಕಟ್ಟಿ ಸಭಾಭವನದಲ್ಲಿ ಈಚೆಗೆ ನಡೆದ ೨೦೨೨-೨೩ನೇ ಸಾಲಿನ ಶ್ರೀ ಸಿದ್ದೇಶ್ವರ ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಕೌಲಗಿ ಹಾಗೂ ವಿಜಯಪುರ ನಗರದಲ್ಲಿ ಶಾಲಾ-ಕಾಲೇಜುಗಳ ಮೂಲಕ ಮಕ್ಕಳಿಗೆ ಜ್ಞಾನಾರ್ಜನೆ ನೀಡುತ್ತಿದ್ದು, ಗ್ರಾಮೀಣ ಪ್ರದೇಶದ ಮಕ್ಕಳಿಗೂ ಅನುಕೂಲ ಆಗಲೆಂದು ಬರುವ ಶೈಕ್ಷಣಿಕ ವರ್ಷದಿಂದಲೇ, ಪ್ರತಿ ವರ್ಷ ಒಂದೊಂದು ತಾಲ್ಲೂಕಿನಲ್ಲಿ ಪಬ್ಲಿಕ್ ಶಾಲೆ ಆರಂಭಿಸಿ, ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕೆಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ತಾಳಿಕೋಟಿ ಪಟ್ಟಣದಲ್ಲಿ ಶ್ರೀ ಸಿದ್ದೇಶ್ವರ ಸಂಸ್ಥೆಗೆ ದೇಣಿಗೆ ನೀಡಲಾದ ೩ ಎಕರೆ ೧೭ ಗುಂಟಾ ಜಮೀನಿನ ಪೈಕಿ, ೨ ಎಕರೆ ಜಾಗೆಯಲ್ಲಿ ದಿ. ಶ್ರೀ ಬಿ.ಓ.ತಂಬಾಕೆ ಅವರ ಹೆಸರಿನಲ್ಲಿ ಪಬ್ಲಿಕ್ ಶಾಲೆ ಬರುವ ಶೈಕ್ಷಣಿಕ ವರ್ಷದಿಂದಲೇ ತರಗತಿ ಆರಂಭಿಸಲಾಗುವುದು. ಅಲ್ಲದೇ, ಅತ್ಯುತ್ತಮವಾದ ಕಲ್ಯಾಣ ಮಂಟಪದ ಸೇವೆ ಕೂಡ ಸಾರ್ವಜನಿಕರಿಗೆ ಸಿಗಲಿದೆ ಎಂದರು. ಅದೇ ರೀತಿ ಬರುವ ಶೈಕ್ಷಣಿಕ ವರ್ಷ ಜೂನ್ ದಿಂದ ಕಲಬುರ್ಗಿ ಜಿಲ್ಲೆಯ ಚಿಂಚೋಳಿಯಲ್ಲಿ ಸಿದ್ದಸಿರಿ ಸೌಹಾರ್ದ ಸಹಕಾರಿ ನಿಯಮಿತದಿಂದ ಪಬ್ಲಿಕ್ ಶಾಲೆ ಆರಂಭಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಸಿದ್ದೇಶ್ವರ ಸಂಸ್ಥೆಯ ಶ್ರೀ ರಾಮನಗೌಡ ಬಾ ಪಾಟೀಲ (ಯತ್ನಾಳ) ಗೋರಕ್ಷಾ ಕೇಂದ್ರದಲ್ಲಿ ವಿಭೂತಿ, ಬಿಳಿ ದಂತಮAಜನ, ಕೆಂಪು ದಂತಮAಜನ, ಕಪ್ಪು ದಂತ ಮಂಜನ, ಚರ್ಮ ರೋಗ ನಿವಾರಣ ಮಲಾಮ, ಪಂಚಗವ್ಯ ಸಾಬೂನು, ಪಾತ್ರೆ ತೊಳೆಯುವ ಸಾಬೂನು, ಪಂಚಗವ್ಯ ಗೃತ್, ಕುಂಕುಮ, ಮಜ್ಜಿಗೆ, ತುಪ್ಪ, ಎರೆಹುಳು ಗೊಬ್ಬರ, ಕುಳ್ಳ ತಯಾರಿಸಲಾಗುತ್ತಿದೆ ಇದರಿಂದ ಉತ್ತಮ ಆದಾಯ ಬರುತ್ತಿದೆ. ಅದೇ ರೀತಿ ವಿಜಯಪುರ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ೫ ಮಹಡಿಯ ಶಿವಾನುಭವ ಮಂಟಪ ಕಾಮಗಾರಿ ಕೂಡ ಅಂತಿಮ ಹಂತದಲ್ಲಿದ್ದು, ಅದರ ಮಳಿಗೆಯಿಂದಲೂ ಬಾಡಿಗೆ ರೂಪದಲ್ಲಿ ಸಾಕಷ್ಟು ಆದಾಯ ಸಂಸ್ಥೆಗೆ ಬರಲಿದೆ. ಇದು ಮತ್ತಷ್ಟು ಧಾರ್ಮಿಕ, ಸಾಮಾಜಿಕ ಕಾರ್ಯಗಳನ್ನು ಮಾಡಲು ಅನುಕೂಲವಾಗಲಿದೆ ಎಂದು ಹೇಳಿದರು.
ಬಡವರಿಗೆ ದೊಡ್ಡ ತಲೆ ನೋವಾದ ವೈದ್ಯಕೀಯ ಸೇವೆ ಕಡಿಮೆ ದರದಲ್ಲಿ, ಗುಣಮಟ್ಟದ ಸೇವೆ ನೀಡಲು ಸಿದ್ದೇಶ್ವರ ಸಂಸ್ಥೆ ಮತ್ತು ಸಿದ್ದಸಿರಿ ಸೌಹಾರ್ದ ಸಹಕಾರಿ ಜಂಟಿಯಾಗಿ ಲೋಕಕಲ್ಯಾಣ ಟ್ರಸ್ಟ್ ಮೂಲಕ ಜೆ.ಎಸ್.ಎಸ್ ಆಸ್ಪತ್ರೆ ಆರಂಭಿಸಿ ಸೇವೆ ನೀಡಲಾಗುತ್ತಿದೆ. ಇದೀಗ ಜಿಲ್ಲೆಯಲ್ಲೇ ಪ್ರಥಮವಾಗಿ ೨೫೦ ಹಾಸಿಗೆಯ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಈಚೆಗೆ ಭೂಮಿಪೂಜೆ ನೆರವೇರಿಸಲಾಗಿದೆ. ಕೆಲವೇ ದಿನಗಳಲ್ಲಿ ದೂರದ ಊರಿಗೆ ಅಲೆಯುವ ತಾಪತ್ರೆಯ ತಪ್ಪಲಿದೆ ಎಂದು ಹೇಳಿದರು.
ಸಿದ್ದೇಶ್ವರ ಸಂಸ್ಥೆಯ ಪದಾಧಿಕಾರಿಗಳು, ಅಧಿಕಾರಿಗಳು, ಸಿಬ್ಬಂದಿ ಇದ್ದರು.

BIJAPUR NEWS patil public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.