ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಪಟ್ಟೀಕಂಥಿ ಹಿರೇಮಠದ ಗುರು ಮಹಾಂತೇಶ್ವರ ಸ್ವಾಮೀಜಿಯವರ ಪುಣ್ಯಸ್ಮರಣೆಯ ಅಮೃತ ಮಹೋತ್ಸವದಂಗವಾಗಿ ಏ.೨೫ ರಂದು ಸಾಮೂಹಿಕ ಅಯ್ಯಾಚಾರ ಮತ್ತು ಶಿವದೀಕ್ಷಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಯ್ಯಾಚಾರ, ಶಿವದೀಕ್ಷೆಯನ್ನು ಪಡೆಯಲು ಇಚ್ಚಿಸುವವರು ಎರಡು ದಿನ ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಬೇಕು. ಅಯ್ಯಾಚಾರ, ಶಿವದೀಕ್ಷೆ ಪಡೆಯುವರು ಕಾರ್ಯಕ್ರಮದ ಹಿಂದಿನ ದಿನ ರಾತ್ರಿಯೆ ಶ್ರೀಮಠಕ್ಕೆ ಬರಬೇಕು. ಹೆಚ್ಚಿನ ಮಾಹಿತಿಗೆ ಮೊ- ೯೯೦೨೬೦೨೧೮೦,೯೯೪೫೩೩೮೨೨೯ ಸಂಪರ್ಕಿಸಬಹುದು ಎಂದು ಪಟ್ಟೀಕಂಥಿ ಹಿರೇಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
